Latest

ದಿಢೀರ್ ದೆಹಲಿಗೆ ದೌಡಾಯಿಸಿದ ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆ ಆರಂಭವಾಗಿದ್ದು, ಫಲಿತಾಂಶ ತೀವ್ರ ಕುತೂಹಲ ಮೂಡಿಸಿದೆ. ಈ ನಡುವೆ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡ ದಿಢೀರ್ ದೆಹಲಿಗೆ ದೌಡಾಯಿಸಿದ್ದಾರೆ.

ಉಪಚುನಾವಣಾ ಫಲಿತಾಂಶದ ಟೆನ್ ಶನ್ ನಡುವೆಯೇ ಹೆಚ್.ಡಿ.ದೇವೇಗೌಡರು ದೆಹಲಿಯತ್ತ ಪ್ರಯಾಣ ಬೆಳೆಸಿದ್ದರೆ, ಇತ್ತ ಸಿಎಂ ಬಸವರಾಜ್ ಬೊಮ್ಮಾಯಿ, ಮಂಡ್ಯ, ಮೈಸೂರು ಜಿಲ್ಲಾ ಪ್ರವಾಸ ಕೈಗೊಂಡಿದ್ದಾರೆ.

ಇಂದು ಬೆಳಿಗ್ಗೆ 9 ಗಮ್ಟೆಗೆ ದೇವೇಗೌಡರು ದಿಢೀರ್ ದೆಹಲಿಗೆ ತೆರಳಿದ್ದು, ಇಂದು ರಾತ್ರಿಯೇ ಬೆಂಗಳೂರಿಗೆ ವಾಪಸ್ ಆಗಲಿದ್ದಾರೆ. ಉಪಚುನಾವಣಾ ಅಖಾಡದಲ್ಲಿ ಸಿಂದಗಿಯಲ್ಲಿ ಬಿಜೆಪಿ ಮುನ್ನಡೆಯಲ್ಲಿದ್ದರೆ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ. ಎರಡೂ ಕ್ಷೇತ್ರಗಳಲ್ಲೂ ಜೆಡಿಎಸ್ ಹಿನ್ನಡೆಯಲ್ಲಿದೆ.

ಉಪಚುನಾವಣಾ ಫಲಿತಾಂಶ; ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ
ಮಾಜಿ ಗೃಹ ಸಚಿವ ಅನಿಲ್ ದೇಶಮುಖ್ ಬಂಧನ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button