Latest

ಹಾನಗಲ್ ನಲ್ಲಿ ಬಿಜೆಪಿಗೆ ಹೀನಾಯ ಸೋಲು; ಕೈ ಅಭ್ಯರ್ಥಿ ಶ್ರೀನಿವಾಸ್ ಮಾನೆಗೆ ಭರ್ಜರಿ ಗೆಲುವು

ಪ್ರಗತಿವಾಹಿನಿ ಸುದ್ದಿ; ಹಾವೇರಿ: ಹಾನಗಲ್ ವಿಧಾನಸಭಾ ಉಪಚುನಾವಣೆಯಲ್ಲಿ ಬಿಜೆಪಿ ತೀವ್ರ ಮುಖಭಂಗ ಅನುಭವಿಸಿದ್ದು, ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಭರ್ಜರಿ ಮುನ್ನಡೆ ಸಾಧಿಸಿದ್ದಾರೆ.

ತೀವ್ರ ಜಿದ್ದಾಜಿದ್ಧಿನಿಂದ ಕೂಡಿದ್ದ ಹಾನಗಲ್ ಉಪಚುನಾವಣಾ ಫಲಿತಾಂಶ ಪ್ರಕಟಗೊಂಡಿದ್ದು, ಸಿಎಂ ಬಸವರಾಜ್ ಬೊಮ್ಮಾಯಿ ತವರೂರಿನಲ್ಲಿಯೇ ಬಿಜೆಪಿ ಅಭ್ಯರ್ಥಿ ಶಿವರಾಜ್ ಸಜ್ಜನ್ ಸೋಲನುಭವಿಸಿದ್ದಾರೆ. ಮತ ಎಣಿಕೆಯ ಮೊದಲ ಸುತ್ತಿನಿಂದಲೂ ಮುನ್ನಡೆ ಕಾಯ್ದುಕೊಂಡಿದ್ದ ಕಾಂಗ್ರೆಸ್ ನ ಶ್ರೀನಿವಾಸ್ ಮನೆ ಗೆಲುವು ಖಚಿತವಾಗಿದ್ದು, ಅಧಿಕೃತ ಘೋಷಣೆ ಮಾತ್ರ ಬಾಕಿ ಇದೆ.

ಹಾನಗಲ್ ಉಪಚುನಾವಣೆಯ 17ನೇ ಸುತ್ತಿನ ಮತಎಣಿಕೆಯಲ್ಲಿಯೂ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಸಾಧಿಸಿದ್ದು, 78,342 ಮತಗಳಿಂದ ಮುನ್ನಡೆಯಲ್ಲಿದಾರೆ. ಬಿಜೆಪಿ 71,326 ಮತಗಳನ್ನು ಪಡೆದಿದೆ. ಜೆಡಿಎಸ್ ಅಭ್ಯರ್ಥಿ ನಿಯಾಜ್ ಶೇಖ್ 866 ಮತಗಳನ್ನು ಪಡೆದಿದ್ದಾರೆ.

ಒಟ್ಟಾರೆ ಉಪಚುನಾವಣೆಯಲ್ಲಿ ಸಿಎಂ ಬೊಮ್ಮಾಯಿ ನೇತೃತ್ವದ ಬಿಜೆಪಿ ಸರ್ಕಾರಕ್ಕೆ ಬೇವು-ಬೆಲ್ಲ ಸಿಕ್ಕಂತಾಗಿದ್ದು ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿ ಭರ್ಜರಿ ಗೆಲುವು ಸಾಧಿಸಿದ್ದರೆ, ಹಾನಗಲ್ ನಲ್ಲಿ ತೀವ್ರ ಮುಖಭಂಗ ಅನುಭವಿಸಿದೆ.

Home add -Advt

Related Articles

Back to top button