Election News

*ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ರೇವಣ್ಣಗೆ ಬಿಗ್ ಶಾಕ್ ಕೊಟ್ಟ JDS*

ಪ್ರಗತಿವಾಹಿನಿ ಸುದ್ದಿ: ಮೂರು ವಿಧಾನಸಭಾ ಕ್ಷೇತ್ರಗಳ ಉಪಚುನಾವಣಾ ಅಖಾಡ ರಂಗೇರಿದ್ದು, ಈ ನಡುವೆ ಜೆಡಿಎಸ್ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ. ಆದರೆ ಪಟ್ಟಿಯಲ್ಲಿ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷರಿಗೆ, ಶಾಸಕ ರೇವಣ್ಣಗೆ ಸ್ಥಾನ ನೀಡಿಲ್ಲದಿರುವುದು ಅಚ್ಚರಿಗೆ ಕಾರಣವಾಗಿದೆ.

Home add -Advt

ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಉಪಚುನಾವಣೆ ಹಿನ್ನೆಲೆಯಲ್ಲಿ ಬಿಜೆಪಿ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿರುವ ಬೆನ್ನಲ್ಲೇ ಜೆಡಿಎಸ್ ಕೂಡ 40 ನಾಯಕರನ್ನು ಒಳಗೊಂಡ ಸ್ಟಾರ್ ಪ್ರಚಾರಕರ ಪಟ್ಟಿ ಬಿಡುಗಡೆ ಮಾಡಿದೆ.

ಇದರಲ್ಲಿ ಹೆಚ್.ಡಿ.ದೇವೇಗೌಡ, ಹೆಚ್.ಡಿ.ಕುಮಾರಸ್ವಾಮಿ ಸೇರಿದಂತೆ ಮಾಜಿ ಶಾಸಕರು, ಹಾಲಿ ಶಾಸಕರ ಹೆಸರುಗಳಿವೆ. ಆದರೆ ಜೆಡಿಎಸ್ ಕೋರ್ ಕಮಿಟಿ ಅಧ್ಯಕ್ಷ ಜಿ.ಟಿ.ದೇವೇಗೌಡ, ಶಾಸಕ ಹೆಚ್.ಡಿ.ರೇವಣ್ಣ ಅವರ ಹೆಸರಿಲ್ಲ. ಇಬ್ಬರನ್ನೂ ಸ್ಟಾರ್ ಪ್ರಚಾರಕರ ಪಟ್ಟಿಯಿಂದ ಹೊರಗಿಡಲಾಗಿದೆ.

Related Articles

Back to top button