*ಬಿಜೆಪಿ ಪ್ರಚಾರಕ್ಕೆ ಹೋಗುವುದಿಲ್ಲ; ಮತ್ತೆ ಜಲಸಂಪನ್ಮೂಲ ಸಚಿವನಾಗುತ್ತೇನೆ: ರಮೇಶ್ ಜಾರಕಿಹೊಳಿ ಹೇಳಿಕೆ*
ಪ್ರಗತಿವಾಹಿನಿ ಸುದ್ದಿ: ಉಪಚುನಾವಣಾ ಪ್ರಚಾರ ಕಾರ್ಯಕ್ಕೆ ಹೋಗುವುದಿಲ್ಲ. ವಿಜಯೇಂದ್ರ ನೇತೃತ್ವದಲ್ಲಿ ಯಾವುದೇ ಕಾರ್ಯಕ್ರಮಕ್ಕೆ ಹೋಗುವುದಿಲ್ಲ ಎಂದು ಶಾಸಕ ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಬೆಳಗಾವಿಯಲ್ಲಿ ಸುದ್ದಿಗೋಷ್ಠಿ ನಡೆಸಿದ ರಮೇಶ್ ಜಾರಕಿಹೊಳಿ, ಬಿ.ವೈ.ವಿಜಯೇಂದ್ರ ನೇತೃತ್ವದಲ್ಲಿ ಉಪಚುನಾವಣಾ ಪ್ರಚಾರಕ್ಕೆ ಹೋಗಲ್ಲ. ನಮ್ಮನ್ನು ಕರೆಯಲು ಅವರು ಯಾರು? ಎಂದು ಪ್ರಶ್ನಿಸಿದರು.
ಪಕ್ಷಕ್ಕೆ ಶುಭ ಹಾರೈಸುತ್ತೇನೆ. ಆದರೆ ನಾನು ಪ್ರಚಾರಕ್ಕೆ ಹೋಗುವುದಿಲ್ಲ. ಮುಂದಿನ ಚುನಾವಣೆಯಲ್ಲಿ ಬಿಜೆಪಿ ಅಧಿಕಾರಕ್ಕೆ ತಂದು ಮತ್ತೆ ಸಚಿವನಾಗುತ್ತೇನೆ. ಜಲಸಂಪನ್ಮೂಲ ಖಾತೆಯನ್ನೇ ಕೇಳುತ್ತೇನೆ.
ನನೆಗುದಿಗೆ ಬಿದ್ದ ಯೋಜನೆಗಳನ್ನು ಜಾರಿಗೊಳಿಸುತ್ತೇವೆ ಎಂದು ರಮೇಶ್ ಜಾರಕಿಹೊಳಿ ತಿಳಿಸಿದ್ದಾರೆ.
ಡಿ.ಕೆ.ಶಿವಕುಮಾರ್ ಪಾರ್ಟ್ ಟೈಂ ಜಲಸಂಪನ್ಮೂಲ ಮಂತ್ರಿ. ಫುಲ್ ಟೈಮ್ ಬಿಬಿಎಂಪಿ ಮಂತ್ರಿ. ರಾಜ್ಯದ ಹಿತದೃಷ್ಟಿಯಿಂದ ಅವರು ಜಲಸಂಪನ್ಮೂಲ ಖಾತೆ ಬಿಟ್ಟು ಕೊಡಬೇಕು ಎಂದರು.
ಡಿ.ಕೆ.ಶಿವಕುಮಾರ್ ಅವರು ಬ್ಲ್ಯಾಕ್ ಮೇಲ್ ಮಾಡಿ ಯೋಗೇಶ್ವರ ಅವರನ್ನು ಸೆಳೆದಿದ್ದಾರೆ ಎನ್ನುವ ಆರೋಪ ಸುಳ್ಳು. ಅವರಾಗಿಯೇ ಕಾಂಗ್ರೆಸ್ ಗೆ ಹೋಗಿದ್ದಾರೆ ಎಂದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ