Election NewsKannada NewsKarnataka NewsPolitics

*ಉಪ ಚುನಾವಣೆ: ಎರಡು ಕ್ಷೇತ್ರಗಳ ಅಭ್ಯರ್ಥಿಗಳ ಹೆಸರು ಘೋಷಿಸಿದ ಬಿಜೆಪಿ*

ಪ್ರಗತಿವಾಹಿನಿ ಸುದ್ದಿ: ರಾಜ್ಯದಲ್ಲಿ ನಡೆಯುತ್ತಿರುವ ಎರಡು ವಿಧಾನಸಭಾ ಕ್ಷೇತ್ರಗಳ ಉಪಚುನಾವಣೆಗೆ ಬಿಜೆಪಿ ತನ್ನ ಅಭ್ಯರ್ಥಿಗಳ ಪಟ್ಟಿಯನ್ನು ಅಧಿಕೃತವಾಗಿ ಪ್ರಕಟಿಸಿದೆ. 

ಬಾಗಲಕೋಟೆ ವಿಧಾನಸಭಾ ಕ್ಷೇತ್ರದಿಂದ ಮಾಜಿ ಶಾಸಕ ಹಾಗೂ ಹಿರಿಯ ನಾಯಕ ವೀರಣ್ಣ ಚರಂತಿಮಠ ಅವರಿಗೆ ಟಿಕೆಟ್ ನೀಡಲಾಗಿದೆ. ಇನ್ನು ದಾವಣಗೆರೆ ದಕ್ಷಿಣ ಕ್ಷೇತ್ರದಿಂದ ಅಚ್ಚರಿಯ ಆಯ್ಕೆಯಾಗಿ ಶ್ರೀನಿವಾಸ್‌ ದಾಸಕರಿಯಪ್ಪ ಅವರಿಗೆ ಟಿಕೆಟ್ ಘೋಷಿಸಲಾಗಿದೆ.

Home add -Advt

ಬಾಗಲಕೋಟೆ ಕ್ಷೇತ್ರದಲ್ಲಿ ಪ್ರಬಲ ಹಿಡಿತ ಹೊಂದಿರುವ ಚರಂತಿಮಠ ಅವರ ಹೆಸರನ್ನು ಅಂತಿಮಗೊಳಿಸುವ ಮೂಲಕ ಬಿಜೆಪಿ ಹಳೆ ಮುಖಕ್ಕೆ ಮನ್ನಣೆ ನೀಡಿದೆ. ಇತ್ತ ದಾವಣಗೆರೆ ಕ್ಷೇತ್ರದಲ್ಲಿ ಪ್ರಬಲ ಪೈಪೋಟಿ ನೀಡುವ ಉದ್ದೇಶದಿಂದ ಹೊಸ ಮುಖಕ್ಕೆ ಬಿಜೆಪಿ ಮಣೆ ಹಾಕಿದೆ.

ಈ ಎರಡು ಕ್ಷೇತ್ರಗಳ ಉಪಚುನಾವಣೆಯು ರಾಜ್ಯ ಸರ್ಕಾರ ಮತ್ತು ಪ್ರತಿಪಕ್ಷ ಬಿಜೆಪಿ ಎರಡಕ್ಕೂ ಪ್ರತಿಷ್ಠೆಯ ಕಣವಾಗಿದೆ. ಅಭ್ಯರ್ಥಿಗಳ ಘೋಷಣೆಯಾದ ಬೆನ್ನಲ್ಲೇ ಎರಡೂ ಕ್ಷೇತ್ರಗಳಲ್ಲಿ ಚುನಾವಣಾ ಪ್ರಚಾರ ಕಾರ್ಯ ಚುರುಕುಗೊಂಡಿದ್ದು, ವರಿಷ್ಠರು ಮತ್ತು ಕಾರ್ಯಕರ್ತರು ಗೆಲುವಿಗಾಗಿ ರಣತಂತ್ರ ರೂಪಿಸಲು ಸಜ್ಜಾಗಿದ್ದಾರೆ.

Related Articles

Back to top button