Election NewsKarnataka NewsPolitics

*ರಾಜ್ಯದ ಮೂರು ಕ್ಷೇತ್ರಗಳಿಗೆ ಇಂದು ಉಪ ಚುನಾವಣೆ: ಮತದಾನ ಆರಂಭ*

ಪ್ರಗತಿವಾಹಿನಿ ಸುದ್ದಿ: ಚನ್ನಪಟ್ಟಣ, ಹಾವೇರಿಯ ಶಿಗ್ಗಾವಿ ಹಾಗೂ ಬಳ್ಳಾರಿ ಜಿಲ್ಲೆಯ ಸಂಡೂರು ವಿಧಾನಸಭಾ ಕ್ಷೇತ್ರಗಳಿಗೆ ಮತದಾನ ಪ್ರಾರಂಭವಾಗಲಿದೆ

ಇಂದು ಬೆಳಗ್ಗೆ 7 ಗಂಟೆಯಿಂದ ಸಂಜೆ 6ರವರೆಗೆ ಮತದಾನ ನಡೆಯಲಿದ್ದು, ಮತದಾರ ಪ್ರಭುಗಳು ಯಾವ ಅಭ್ಯರ್ಥಿಗೆ ಆಶೀರ್ವದಿಸಲಿದ್ದಾರೆಂಬುವುದು ಕುತೂಹಲ ಮೂಡಿಸಿದೆ.

Home add -Advt

ಹೆಚ್.ಡಿ. ಕುಮಾರಸ್ವಾಮಿ ಅವರು ಲೋಕಸಭೆಯ ಚುನಾವಣೆಯಲ್ಲಿ ಮಂಡ್ಯದಿಂದ ಸ್ಪರ್ಧಿಸಿ ಗೆದ್ದು ಕೇಂದ್ರದಲ್ಲಿ ಮಂತ್ರಿಯಾಗಿದ್ದು, ಅವರಿಂದ ತೆರವಾದ ಚನ್ನಪಟ್ಟಣ ಕ್ಷೇತ್ರಕ್ಕೆ ಉಪಚುನಾವಣೆ ನಡೆಯುತ್ತಿದೆ. ಅದೇ ರೀತಿ ಮಾಜಿ ಸಿಎಂ ಬಸವರಾಜ ಬೊಮ್ಮಾಯಿ ಅವರು ಲೋಕಸಭೆ ಚುನಾವಣೆಗೆ ಸ್ಪರ್ಧಿಸಿ ಗೆಲುವು ಸಾಧಿಸಿದ ಕಾರಣ ತೆರವಾದ ಶಿಗ್ಗಾವಿ ಕ್ಷೇತ್ರ ಹಾಗೂ ಈ.ತುಕಾರಾಂ ಸಂಸದರಾದ ನಂತರ ಅವರು ಪ್ರತಿನಿಧಿಸುತ್ತಿದ್ದ ಸಂಡೂರು ಕ್ಷೇತ್ರದ ಶಾಸಕರ ಆಯ್ಕೆಗೆ ಇಂದು ಮತದಾನ ನಡೆಯಲಿದೆ.

ರಾಜ್ಯ ಉಪಚುನಾವಣೆಯ ಹೈವೀಲ್ವೇಜ್ ಕ್ಷೇತ್ರ ಎಂದೇ ಪರಿಗಣಿಸಲ್ಪಟ್ಟಿರುವ ಚನ್ನಪಟ್ಟಣದಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ನಿಖಿಲ್ ಕುಮಾರಸ್ವಾಮಿ ಕಣದಲ್ಲಿದ್ದರೆ, ಕಾಂಗ್ರೆಸ್ ಅಭ್ಯರ್ಥಿಯಾಗಿ ಸಿ.ಪಿ.ಯೋಗೇಶ್ವರ್ ಅವರು ಸ್ಪರ್ಧಿಸಿದ್ದಾರೆ. ಇನ್ನು ಶಿಗ್ಗಾವಿಯಲ್ಲಿ ಬಸವರಾಜ ಬೊಮ್ಮಾಯಿ ಅವರ ಪುತ್ರ ಭರತ್ ಬೊಮ್ಮಾಯಿ ಎನ್‌ಡಿಎ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್‌ನಿಂದ ಎದುರಾಳಿಯಾಗಿ ಯಾಸಿರ್ ಪಠಾಣ್ ಕಣದಲ್ಲಿದ್ದಾರೆ. ಅತ್ತ ಸಂಡೂರಿನಲ್ಲಿ ಎನ್‌ಡಿಎ ಅಭ್ಯರ್ಥಿಯಾಗಿ ಬಂಗಾರು ಹನುಮಂತು ಎದುರಿಗೆ ಸಂಸದ ಈ ತುಕಾರಾಂ ಅವರ ಪತ್ನಿ ಅನ್ನಪೂರ್ಣ ಅವರು ಕಣದಲ್ಲಿದ್ದಾರೆ.

Related Articles

Back to top button