Election News

*ಸಂಡೂರು ಉಪಚುನಾವಣೆ: ಕಾಂಗ್ರೆಸ್ ಅಭ್ಯರ್ಥಿ ಫೈನಲ್*

ಸಂಸದ ಇ.ತುಕಾರಾಂ ಪತ್ನಿಗೆ ಟಿಕೆಟ್

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ಕ್ಷೇತ್ರಗಳಾದ ಸಂಡೂರು, ಶಿಗ್ಗಾಂವಿ, ಚನ್ನಪಟ್ಟಣ ಕ್ಷೇತ್ರಗಳ ಉಪಚುನಾವಣೆ ತೀವ್ರ ಕುತೂಹಲ ಮೂಡಿಸಿದ್ದು, ಆಡಳಿತಾರೂಢ ಕಾಂಗ್ರೆಸ್ ಹಾಗೂ ವಿಪಕ್ಷಗಳಾದ ಬಿಜೆಪಿ-ಜೆಡಿಎಸ್ ಗೆ ಪ್ರತಿಷ್ಠೆಯ ಕಣಗಳಾಗಿ ಪರಿಣಮಿಸಿದೆ.

ಈಗಾಗಾಗ್ಲೇ ಸಂಡೂರು ಹಾಗೂ ಶಿಗ್ಗಾಂವಿ ಕ್ಷೇತ್ರಕ್ಕೆ ಎನ್ ಡಿಎ ಅಭ್ಯರ್ಥಿಯನ್ನಾಗಿ ಬಿಜೆಪಿ ನಾಯಕರಿಗೆ ಟಿಕೆಟ್ ನೀಡಲಾಗಿದೆ. ಚನ್ನಪಟ್ಟಣ ಮಾತ್ರ ಬಾಕಿಯಿದೆ. ಇದರ ಬೆನ್ನಲ್ಲೇ ಕಾಂಗ್ರೆಸ್ ನಾಯಕರು ಸಂಡೂರು ಕ್ಷೇತ್ರದ ಅಭ್ಯರ್ಥಿ ಫೈನಲ್ ಮಾಡಿದ್ದಾರೆ.

ಮೈಸೂರಿನಲ್ಲಿ ಮಾತನಾಡಿದ ಸಿಎಂ ಸಿದ್ದರಾಮಯ್ಯ, ಸಂಡೂರು ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸಂಸದರಾದ ಇ.ತುಕಾರಾಂ ಅವರ ಪತ್ನಿ ಅವರಿಗೆ ಟಿಕೆಟ್ ನೀಡಲಾಗುವುದು ಎಂದು ತಿಳಿಸಿದ್ದಾರೆ.

ಇ.ತುಕಾರಾಂ ಪತ್ನಿ ಅನ್ನಪೂರ್ಣ ಅವರನ್ನು ಸಂಡೂರು ಕ್ಷೇತ್ರದಿಂದ ಕಾಂಗ್ರೆಸ್ ಅಭ್ಯರ್ಥಿಯನ್ನಾಗಿ ಆಯ್ಕೆ ಮಾಡಲಾಗಿದೆ. ಚನ್ನಪಟ್ಟಣದಲ್ಲಿ ಸೂಕ್ತ ಅಭ್ಯರ್ಥಿಗೆ ಟಿಕೆಟ್ ನೀಡಬೇಕು ಎನ್ನುವ ಚರ್ಚೆ ಆಗಿದೆ. ಡಿ.ಕೆ.ಸುರೇಶ್ ಅವರೂ ಕೂಡ ಪ್ರಭಲ ಅಭ್ಯರ್ಥಿ ಆಗಿದ್ದಾರೆ. ಒಂದೆರಡು ದಿನಗಳಲ್ಲಿ ಚನ್ನಪಟ್ಟಣ ಮತ್ತು ಶಿಗ್ಗಾಂವ್ ಕ್ಷೇತ್ರದಲ್ಲಿ ಯಾರಿಗೆ ಟಿಕೆಟ್ ಎನ್ನುವುದು ಸ್ಪಷ್ಟವಾಗಲಿದೆ ಎಂದು ಹೇಳಿದರು.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button