Latest

ಸಿಂದಗಿಯಲ್ಲಿ ಗೆಲುವಿನತ್ತ ದಾಪುಗಾಲಿಟ್ಟ ಬಿಜೆಪಿ; ಕಾರ್ಯಕರ್ತರ ಸಂಭ್ರಮ

ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಸಿಂದಗಿ ಹಾಗೂ ಹಾನಗಲ್ ಉಪಚುನಾವಣಾ ಮತ ಎಣಿಕೆ ಚುರುಕುಗೊಂಡಿದ್ದು, ಎರಡೂ ಕ್ಷೇತ್ರಗಳ ಫಲಿತಾಂಶ ಕ್ಷಣ ಕ್ಷಣಕ್ಕೂ ತೀವ್ರ ಕುತೂಹಲ ಮೂಡಿಸಿದೆ. ಸಿಂದಗಿಯಲ್ಲಿ ಬಿಜೆಪಿ ಅಭ್ಯರ್ಥಿ ಭಾರಿ ಮುನ್ನಡೆ ಸಾಧಿಸಿದ್ದು, ಗೆಲುವಿನತ್ತ ದಾಪುಗಾಲಿಟ್ಟಿದ್ದಾರೆ.

ಸಿಂದಗಿಯಲ್ಲಿ 13ನೇ ಸುತ್ತಿನ ಮತ ಎಣಿಕೆ ಮುಕ್ತಾಯಗೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 18,863 ಮತಗಳ ಅಂತರದಿಂದ ಮುನ್ನಡೆ ಕಾಯ್ದುಕೊಂಡಿದ್ದಾರೆ. ಬಿಜೆಪಿ ಅಭ್ಯರ್ಥಿ ರಮೇಶ್ 57,484 ಮತಗಳನ್ನು ಪಡೆದಿದ್ದರೆ ಕಾಂಗ್ರೆಸ್ ಅಶೋಕ್ ಮನಗೂಳಿ 38,621 ಮತಗಳನ್ನು ಪಡೆದಿದ್ದಾರೆ. ಇನ್ನು ಜೆಡಿಎಸ್ ಅಭ್ಯರ್ಥಿ ನಾಜಿಯಾ 2736 ಮತಗಳನ್ನು ಪಡೆದು ಹಿನ್ನಡೆಯಲಿದ್ದಾರೆ.

Home add -Advt

ಸಿಂದಗಿ ಅಖಾಡಲ್ಲಿ 13ನೇ ಸುತ್ತಿನಲ್ಲಿಯೂ ಬಿಜೆಪಿ ಭರ್ಜರಿ ಮುನ್ನಡೆ ಕಾಯ್ದುಕೊಂಡ ಹಿನ್ನೆಲೆಯಲ್ಲಿ ಕಾರ್ಯಕರ್ತರು ಸಂಭ್ರಮಾಚರಣೆಯಲ್ಲಿ ತೊಡಗಿದ್ದಾರೆ. ರಮೇಶ್ ಭೂಸನೂರ ಬೆಂಬಲಿಗರು ಪರಸ್ಪರ ಬಣ್ಣ ಬಳಿದು ವಿಜಯೋತ್ಸವ ಆಚರಿಸುತ್ತಿದ್ದಾರೆ.

ಈ ನಡುವೆ ಹಾನಗಲ್ ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಶ್ರೀನಿವಾಸ್ ಮಾನೆ ಮುನ್ನಡೆ ಕಾಯ್ದುಕೊಂಡಿದ್ದಾರೆ.

ಉಪಚುನಾವಣಾ ಫಲಿತಾಂಶ; ಸಿಂದಗಿಯಲ್ಲಿ ಬಿಜೆಪಿ, ಹಾನಗಲ್ ನಲ್ಲಿ ಕಾಂಗ್ರೆಸ್ ಮುನ್ನಡೆ

Related Articles

Back to top button