ಪ್ರಗತಿವಾಹಿನಿಸುದ್ದಿ; ವಿಜಯಪುರ: ಇಂದು ಮಿನಿ ಸಮರ ಎಂದೇ ಬಿಂಬಿತವಾಗಿರುವ ಹಾನಗಲ್ ಹಾಗೂ ಸಿಂದಗಿ ಕ್ಷೇತ್ರಗಳ ಉಪಚುನಾವಣಾ ಫಲಿತಾಂಶ ಪ್ರಕಟವಾಗಲಿದೆ.
ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ ಸಜ್ಜನರ್, ಕಾಂಗ್ರೆಸ್ನಿಂದ ಶ್ರೀನಿವಾಸ್ ಮಾನೆ, ಜೆಡಿಎಸ್ನಿಂದ ನಿಯಾಜ್ ಶೇಖ್ ಸ್ಪರ್ಧಿಸಿದ್ದಾರೆ. ಸಿಂದಗಿ ಕ್ಷೇತ್ರದಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್ನಿಂದ ನಾಜಿಯಾ ಅಂಗಡಿ, ಕಾಂಗ್ರೆಸ್ ಪಕ್ಷದಿಂದ ಅಶೋಕ್ ಮನಗೂಳಿ ಕಣಕ್ಕಿಳಿದಿದ್ದಾರೆ. ಈಗಗಾಲೇ ಎರಡೂ ಕ್ಷೇತ್ರಗಳಲ್ಲಿ ಮತಎಣಿಕೆ ಆರಂಭವಾಗಿದೆ.
ಸಿಂದಗಿಯಲ್ಲಿ 4ನೇ ಸುತ್ತಿನಲ್ಲಿ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದ್ದು, ಬಿಜೆಪಿ ಅಭ್ಯರ್ಥಿ ರಮೇಶ್ ಭೂಸನೂರ 4850 ಮತಗಳ ಅಂತರದಿಂದ ಮುನ್ನಡೆ ಕಯ್ದುಕೊಂಡಿದ್ದಾರೆ. 13,081 ಮತಗಳನ್ನು ಪಡೆದಿದ್ದಾರೆ. ಹಾನಗಲ್ ನಲ್ಲಿ ಎರಡನೆ ಸುತ್ತಿನ ಮತಎಣಿಕೆ ಬಳಿಕ ಕಾಗ್ರೆಸ್ ಹಿಂದಿಕ್ಕಿರುವ ಬಿಜೆಪಿ ಮುನ್ನಡೆ ಕಾಯ್ದುಕೊಂಡಿದೆ.
ಬಿಜೆಪಿ, ಕಾಂಗ್ರೆಸ್, ಜೆಡಿಎಸ್ ಗೆ ತೀವ್ರ ಜಿದ್ದಾಜಿದ್ದಿನ ಅಖಾಡವಾಗಿರುವ ಸಿಂದಗಿ ಹಾಗೂ ಹಾನಗಲ್ ಕ್ಷೇತ್ರದ ಉಪಚುನಾವಣೆಯಲ್ಲಿ ವಿಜಯಮಾಲೆ ಯಾರಿಗೆ ಒಲಿಯಲಿದೆ ಎಂಬುದನ್ನು ಕಾದುನೋಡಬೇಕಿದೆ. ಮಧ್ಯಾಹ್ನದ ವೇಳೆಗೆ ಫಲಿತಾಂಶ ಬಹುತೇಕ ಪ್ರಕಟವಾಗಲಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ