Latest

ಉಪಚುನಾವಣೆ; ಕಾಂಗ್ರೆಸ್ ಅಭ್ಯರ್ಥಿಗಳ ಘೋಷಣೆ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಂದಗಿ ಹಾಗೂ ಹಾನಗಲ್ ಉಪಚುನಾವಣೆಗೆ ದಿನಗಣನೆ ಆರಂಭವಾಗಿದ್ದು, ಇದೀಗ ಕಾಂಗ್ರೆಸ್ ಅಭ್ಯರ್ಥಿಗಳನ್ನು ಘೋಷಣೆ ಮಾಡಿದೆ.

ಸಿಂದಗಿ ವಿಧಾನಸಭಾ ಕ್ಷೇತ್ರಕ್ಕೆ ಅಶೋಕ್ ಮನಗೂಳಿ ಹಾಗೂ ಹಾನಗಲ್ ಕ್ಷೇತ್ರಕ್ಕೆ ಶ್ರೀನಿವಾಸ್ ಮಾನೆ ಅವರಿಗೆ ಕಾಂಗ್ರೆಸ್ ಟಿಕೆಟ್ ನೀಡಲಾಗಿದೆ. ಅಕ್ಟೋಬರ್ 8 ರಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯ ನೇತೃತ್ವದಲ್ಲಿ ಅಭ್ಯರ್ಥಿಗಳು ನಾಮಪತ್ರ ಸಲ್ಲಿಸಲಿದ್ದಾರೆ.

ಅಕ್ಟೋಬರ್ 30ರಂದು ಉಪಚುನಾವಣೆ ನಡೆಯಲಿದ್ದು, ಸಿಂದಗಿಯಲ್ಲಿ 2 ಸಾವಿರ ಮತಗಳ ಅಂತರದಿಂದ ಕಾಂಗ್ರೆಸ್ ಅಭ್ಯರ್ಥಿ ಗೆಲುವು ಸಾಧಿಸಲಿದ್ದಾರೆ. ಹಾನಗಲ್ ನಲ್ಲೂ ನಮ್ಮದೇ ಗೆಲುವು ಖಚಿತ ಎಂದು ಕೆಪಿಸಿಸಿ ಕಾರ್ಯಾಧ್ಯಕ್ಷ ಈಶ್ವರ ಖಂಡ್ರೆ ವಿಶ್ವಾಸ ವ್ಯಕ್ತಪಡಿಸಿದ್ದಾರೆ.
ಹೆತ್ತ ಮಕ್ಕಳಿಗೆ ವಿಷವುಣಿಸಿ ಸಾವಿಗೆ ಶರಣಾದ ತಾಯಿ; ಕಾರಣವೇನು ಗೊತ್ತೆ?

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button