ಪ್ರಗತಿವಾಹಿನಿ ಸುದ್ದಿ; ವಿಜಯಪುರ: ಮಿನಿ ಸಮರ ಎಂದೇ ಬಿಂಬಿತವಾಗಿರುವ ಹಾನಗಲ್ ಹಾಗೂ ಸಿಂದಗಿ ವಿಧಾನಸಭಾ ಕ್ಷೇತ್ರಗಳ ಉಪಚುನವಣಾ ಮತದಾನ ಆರಂಭವಾಗಿದೆ. ಬೆಳಿಗ್ಗೆ 7 ಗಂಟೆಯಿಂದಲೇ ಮತದಾನ ಪ್ರಕ್ರಿಯೆ ಆರಂಭವಾಗಿದ್ದು, ಸಂಜೆ 7 ಗಂಟೆಯವರೆಗೂ ಮತದಾನ ನಡೆಯಲಿದೆ.
ಹಾನಗಲ್ ಕ್ಷೇತ್ರದಲ್ಲಿ ಬಿಜೆಪಿಯಿಂದ ಶಿವರಾಜ್ ಸಜ್ಜನರ್, ಕಾಂಗ್ರೆಸ್ ನಿಂದ ಶ್ರೀನಿವಾಸ್ ಮಾನೆ ಹಾಗೂ ಜೆಡಿಎಸ್ ನಿಂದ ನಿಯಾಜ್ ಶೇಖ್ ಸ್ಪರ್ಧಿಸಿದ್ದರೆ, ಸಿಂದಗಿಯಲ್ಲಿ ಬಿಜೆಪಿಯಿಂದ ರಮೇಶ್ ಭೂಸನೂರ, ಜೆಡಿಎಸ್ ನಿಂದ ನಾಜಿಯಾ ಅಂಗಡಿ, ಕಾಂಗ್ರೆಸ್ ಪಕ್ಷದಿಂದ ಅಶೋಕ್ ಮನಗೂಳಿ ಕಣಕ್ಕಿಳಿದಿದ್ದಾರೆ.
ಹಾನಗಲ್ ಕ್ಷೇತ್ರದಲ್ಲಿ 1,05,525 ಪುರುಷರು, 98,953 ಮಹಿಳೆಯರು, 83 ಸೇವಾ ಮತದಾರರು, ಮೂವರು ಇತರೆ ಮತದಾರರು ಸೇರಿದಂತೆ ಒಟ್ಟು 2.04,564 ಮತದಾರರು ಹಕ್ಕು ಚಲಾಯಿಸುತ್ತಾರೆ. 239 ಮೂಲ ಮತಗಟ್ಟೆಗಳು ಮತ್ತು 24 ಹೆಚ್ಚುವರಿ ಮತಗಟ್ಟೆಗಳು ಸೇರಿ ಒಟ್ಟು 263 ಮತಗಟ್ಟೆಗಳು ಸಿದ್ಧವಾಗಿವೆ. 263 ಮತಗಟ್ಟೆಗಳಲ್ಲಿ ಒಟ್ಟು 1,155 ಸಿಬ್ಬಂದಿಗಳು ಕಾರ್ಯನಿರ್ವಹಿಸುತ್ತಿದ್ದಾರೆ. 33 ಸೂಕ್ಷ್ಮ ಮತ್ತು 3 ಅತಿಸೂಕ್ಷ್ಮ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ. 121 ಮತಗಟ್ಟೆಗಳಲ್ಲಿ ವೆಬ್ ಕಾಸ್ಟಿಂಗ್ ಸೌಲಭ್ಯ ಒದಗಿಸಲಾಗಿದೆ. ಒಂದು ವಿಕಲಚೇತನ ಸ್ನೇಹಿ ಮತಗಟ್ಟೆ ಮತ್ತು ಎರಡು ಸಖಿ ಮತಗಟ್ಟೆಗಳನ್ನು ಸ್ಥಾಪಿಸಲಾಗಿದೆ.
ಸಿಂದಗಿ ಉಪಚುನಾವಣೆಯಲ್ಲಿ ಒಟ್ಟು 2,34,584 ಜನರು ಮತದಾನ ಮಾಡಲಿದ್ದಾರೆ. 1,20,844 ಪುರುಷರು, 1,13561 ಮಹಿಳೆಯರು ಮತದಾನ ಮಾಡುತ್ತಾರೆ. ಇತರೆ 32 ಮತದಾರರು ಹಾಗೂ 147 ಸರ್ವಿಸ್ ವೋಟರ್ಗಳು ಮತ ಚಲಾಯಿಸಲಿದ್ದಾರೆ. ಮತದಾನಕ್ಕಾಗಿ ಒಟ್ಟು 297 ಮತದಾನ ಕೇಂದ್ರಗಳನ್ನು ಸ್ಥಾಪಿಸಲಾಗಿದೆ. ಚುನಾವಣಾ ಅಕ್ರಮ ತಡೆಗೆ 7 ಚೆಕ್ ಪೋಸ್ಟ್ಗಳು ಕಾರ್ಯ ನಿರ್ವಹಿಸುತ್ತಿವೆ.ಸಿಂದಗಿ ಕ್ಷೇತ್ರಕ್ಕೆ 22 ಸೆಕ್ಟರ್ ಆಫೀಸರ್ಗಳು, 18 ಫ್ಲೈಯಿಂಗ್ ಸ್ಕ್ವೇಡ ತಂಡಗಳು, 21 ಸ್ಟ್ಯಾಟಿಕ್ ಸರ್ವೆಲೆನ್ಸ್ ತಂಡಗಳು ಕಾರ್ಯನಿರ್ವಹಿಸುತ್ತಿವೆ. ಓರ್ವ ಸಹಾಯಕ ಎಕ್ಸ್ಪೆಂಡಿಚರ್ ಅಬ್ಸರ್ವರ್, 1 ಅಕೌಂಟಿಂಗ್ ತಂಡ, 6 ವಿಡಿಯೋ ಸರ್ವೆಲೆನ್ಸ್ ತಂಡಗಳು, 2 ವಿವಿಂಗ್ ತಂಡಗಳು, 2 ಜಿಲ್ಲಾಮಟ್ಟದ ಮಾಸ್ಟರ್ ಟ್ರೈನರ್ಗಳು ಹಾಗೂ ವಿಧಾನಸಭಾ ಕ್ಷೇತ್ರ ಮಟ್ಟದಲ್ಲಿ 23 ಮಾಸ್ಟರ್ ಟ್ರೈನರ್ಗಳು ಕಾರ್ಯನಿರ್ವಹಿಸುತ್ತಿದ್ದಾರೆ. ಮತದಾನ ಕರ್ತವ್ಯಕ್ಕೆ 1,308 ಸಿಬ್ಬಂದಿಗಳನ್ನು ನಿಯೋಜಿಸಲಾಗಿದೆ.
ಪುನೀತ್ ಸಾವಿನಿಂದ ಮನನೊಂದ ಅಭಿಮಾನಿ ಆತ್ಮಹತ್ಯೆ; ನೆಚ್ಚಿನ ನಟನನ್ನು ಕಳೆದುಕೊಂಡು ಶಾಕ್ ಗೆ ಹೃದಯಾಘಾತಕ್ಕೀಡಾದ ಮತ್ತೊಬ್ಬ ಅಭಿಮಾನಿ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ