ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಶಿರಾ ಹಾಗೂ ರಾಜರಾಜೇಶ್ವರಿ ನಗರ ಉಪಚುನಾವಣೆಗೆ ಕೊನೆಗೂ ಬಿಜೆಪಿ ಹೈಕಮಾಂಡ್ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ. ಶಿರಾ ಕ್ಷೇತ್ರಕ್ಕೆ ಡಾ.ರಾಜೇಶ್ ಗೌಡ ಹಾಗೂ ಆರ್.ಆರ್.ನಗರಕ್ಕೆ ಮುನಿರತ್ನ ಅವರಿಗೆ ಟಿಕೆಟ್ ಪ್ರಕಟಿಸಲಾಗಿದೆ.
ನವೆಂಬರ್ 3ರರಂದು ಶಿರಾ ಹಾಗೂ ಆರ್.ಆರ್.ನಗರ ಕ್ಷೇತ್ರಗಳ ಉಪಚುನಾವಣೆ ನಡೆಯಲಿದ್ದು, ಬಿಜೆಪಿ ಟಿಕೆಟ್ ಹಂಚಿಕೆ ತೀವ್ರ ಕುತೂಹಲವನ್ನು ಕೆರಳಿಸಿತ್ತು. ಇದೀಗ ಅಂತಿಮವಾಗಿ ಎರಡೂ ಕ್ಷೇತ್ರಕ್ಕೂ ಟಿಕೆಟ್ ಘೋಷಣೆ ಮಾಡಿದೆ.
ಡಾ.ರಾಜೇಶ್ ಗೌಡ ಇತ್ತೀಚೆಗೆ ಬಿಜೆಪಿಗೆ ಸೇರ್ಪಡೆಯಾಗಿದ್ದರು. ಈ ಹಿನ್ನೆಲೆಯಲ್ಲಿ ಶಿರಾದಲ್ಲಿ ರಾಜೇಶ್ ಅವರಿಗೆ ಬಿಜೆಪಿ ಟಿಕೆಟ್ ನೀದಿದೆ. ಇನ್ನು ಕಾಂಗ್ರೆಸ್ ತೊರೆದು ಬಿಜೆಪಿ ಸರ್ಕಾರ ರಚನೆಗೆ ಪ್ರಮುಖ ಪಾತ್ರವಹಿಸಿದ್ದ ಹಿನೆಲೆಯಲ್ಲಿ ಆರ್.ಆರ್.ನಗರದಲ್ಲಿ ಮುನಿರತ್ನಗೆ ಟಿಕೆಟ್ ನೀಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ