Latest

ವಿಜಯೇಂದ್ರ ಮೈಸೂರಲ್ಲಿ ಮನೆ ಮಾಡ್ತಾರೆ; ಬಿ.ಎಸ್ ವೈ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ರಾಯಚೂರು: ಉಪಚುನಾವಣೆ ಹಿನ್ನೆಲೆಯಲ್ಲಿ ರಾಜಕೀಯ ಪಕ್ಷಗಳ ಪ್ರಚಾರ ಭರಾಟೆ ಜೋರಾಗಿದೆ. ಈ ನಡುವೆ ಬಸವಕಲ್ಯಾಣ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿ ಬಿ.ವೈ.ವಿಜಯೇಂದ್ರ ಕಣಕ್ಕಿಳಿಯಲಿದ್ದಾರೆ ಎಂಬ ಸುದ್ದಿಗೆ ಇದೀಗ ಸಿಎಂ ಯಡಿಯೂರಪ್ಪ ತೆರೆ ಎಳೆದಿದ್ದಾರೆ.

ರಾಯಚೂರಿನಲ್ಲಿ ಮಾತನಾಡಿದ ಸಿಎಂ ಯಡಿಯೂರಪ್ಪ, ವಿಜಯೇಂದ್ರ ಬಸವಕಲ್ಯಾಣದಿಂದ ಸ್ಪರ್ಧಿಸುತ್ತಾರೆ ಎಂಬುದು ಸತ್ಯಕ್ಕೆ ದೂರವಾದ ಸಂಗತಿ. ವಿಜಯೇಂದ್ರ ಸ್ಪರ್ಧೆ ಕೇವಲ ವದಂತಿ ಎಂದು ಸ್ಪಷ್ಟಪಡಿಸಿದರು.

ಇನ್ನು ಉಪಚುನಾವಣೆ ಮುಗಿದ ಬಳಿಕ ವಿಜಯೇಂದ್ರ ಮೈಸೂರಿನಲ್ಲಿ ಮನೆ ಮಾಡಲಿದ್ದಾರೆ. ಅಲ್ಲಿ ಎರಡು ಮೂರು ಕ್ಷೇತ್ರಗಳಲ್ಲಿ ಪಕ್ಷ ಸಂಘಟನೆ ಮಾಡಬೇಕಿದೆ. ಮುಂದಿನ ಬಾರಿ ವರುಣಾ ಕ್ಷೇತ್ರದಿಂದ ಸ್ಪರ್ಧಿಸುವ ಬಗ್ಗೆ ಚರ್ಚೆ ನಡೆದಿದೆ. ವಿಜಯೇಂದ್ರ ಸ್ಪರ್ಧೆ ಬಗ್ಗೆ ಪಕ್ಷ ನಿರ್ಧಾರ ಕೈಗೊಳ್ಳಲಿದೆ ಎಂದು ಹೇಳಿದರು.

ಉಪಚುನಾವಣೆಯಲ್ಲಿ ಮೂರು ಕ್ಷೇತ್ರಗಳಲ್ಲಿ ಬಿಜೆಪಿ ಗೆಲುವು ಖಚಿತ. ಶೀಘ್ರದಲ್ಲಿಯೇ ಬಿಜೆಪಿ ಅಭ್ಯರ್ಥಿಗಳನ್ನು ಘೋಷಿಸಲಾಗುತ್ತದೆ ಎಂದು ಹೇಳಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button