Election NewsPolitics

*ಉಪಚುನಾವಣಾ ಫಲಿತಾಂಶ ಅಪ್ ಡೇಟ್: ಮೂರು ಕ್ಷೇತ್ರಗಳಲ್ಲಿಯೂ ಕಾಂಗ್ರೆಸ್ ಮುನ್ನಡೆ*

ಪ್ರಗತಿವಾಹಿನಿ ಸುದ್ದಿ: ರಾಜ್ಯದ ಮೂರು ಕ್ಷೇತ್ರಗಳ ಉಪಚುನಾವಣಾ ಮತ ಎಣಿಕೆ ಕಾರ್ಯ ಬಿರುಸಿನಿಂದ ಸಾಗಿದ್ದು, ಸದ್ಯದ ಮಾಹಿತಿ ಪ್ರಕಾರ ಮೂರು ಕ್ಷೇತ್ರಗಳಲ್ಲಿಯೂ ಆಡಳಿತಾರೂಢ ಕಾಂಗ್ರೆಸ್ ಮುನ್ನಡೆ ಕಾಯ್ದುಕೊಂಡಿದೆ.

Home add -Advt

ನ.13ರಂದು ಚನ್ನಪಟ್ಟಣ, ಶಿಗ್ಗಾಂವಿ, ಸಂಡೂರು ಕ್ಷೇತ್ರಗಳಿಗೆ ಉಪಚುನವಣೆ ನಡೆದಿತ್ತು. ಇಂದು ಫಲಿತಾಂಶ ಪ್ರಕಟವಾಗಲಿದೆ.
ಚನ್ನಪಟ್ಟಣದಲ್ಲಿ 1೦ನೇ ಸುತ್ತಿನ ಮತ ಎಣಿಕೆ ಮುಕ್ತಾಯವಾಗಿದ್ದು, ಎನ್ ಡಿಎ ಅಭ್ಯರ್ಥಿ ನಿಖಿಲ್ ಕುಮರಸಾಮಿಗೆ ಭಾರಿ ಹಿನ್ನಡೆಯಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಸಿ.ಪಿ.ಯೋಗೇಶ್ವರ್ ಭಾರಿ ಮುನ್ನಡೆ ಸಾಧಿಸಿದ್ದಾರೆ.

ಎನ್ ಡಿಎ ಅಭ್ಯರ್ಥಿ ನಿಖಿಲ್ ಗಿಂತ ಯೋಗೇಶ್ವರ್ 18,000 ಮತಗಳ ಅಂತರದಿಂದ ಮುನ್ನಡೆಯಲಿದ್ದಾರೆ.

ಶಿಗ್ಗಾಂವಿಯಲ್ಲಿ ಆರಂಭದಿಂದ ಮುನ್ನಡೆ ಕಾಯ್ದುಕೊಂಡಿದ್ದ ಭರತ್ ಬೊಮ್ಮಾಯಿಗೆ ಆಘಾತವಾಗಿದೆ. ಕಾಂಗ್ರೆಸ್ ಅಭ್ಯರ್ಥಿ ಯಾಸೀರ್ ಪಠಾಣ್ ಮುನ್ನಡೆಸಾಧಿಸಿದ್ದು, 6 ಸಾವಿರಕ್ಕೂ ಅಧಿಕ ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

ಸಂಡೂರು ಕ್ಷೇತ್ರದಲ್ಲಿ ಕಾಂಗ್ರೆಸ್ ಅಭ್ಯರ್ಥಿ ಅನ್ನಪೂರ್ಣ ತುಕಾರಾಮ್ ಮುನ್ನಡೆ ಸಾಧಿಸಿದ್ದಾರೆ. ಬಿಜೆಪಿ ಅಭ್ಯರ್ಥಿ ಬಂಗಾರು ಹನುಮಂತು ಅವರಿಗಿಂತ 3,654 ಮತಗಳ ಅಂತರದಿಂದ ಮುನ್ನಡೆಯಲ್ಲಿದ್ದಾರೆ.

Related Articles

Back to top button