Latest

ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಯಾಗಿದ್ದು ಶಿವರಾಮ್ ಹೆಬ್ಬಾರ್ ಕಾರಲ್ಲ

ಪ್ರಗತಿವಾಹಿನಿ ಸುದ್ದಿ; ಹುಬ್ಬಳ್ಳಿ:  ಬಿಜೆಪಿ ಮುಖಂಡ ಲಿಂಗರಾಜ ಪಾಟೀಲ ಅವರ ಕಾರು ಮುಖ್ಯಮಂತ್ರಿ ಬಸವರಾಜ್ ಬೊಮ್ಮಾಯಿ ಅವರ ಬೆಂಗಾಲು ವಾಹನಕ್ಕೆ ಡಿಕ್ಕಿಹೊಡೆದ ಘಟನೆ ಹುಬ್ಬಳ್ಳಿಯಲ್ಲಿ ನಡೆದಿದೆ.

ಯಲ್ಲಾಪುರ ಪ್ರವಾಹಪೀಡಿದ ಪ್ರದೇಶ ಪರಿಶೀಲನೆಗೆ ಹುಬ್ಬಳ್ಳಿಯಿಂದ ಸಿಎಂ ಬೊಮ್ಮಾಯಿ ತೆರಳುತ್ತಿದ್ದ ವೇಳೆ ಈ ಘಟನೆ ನಡೆದಿದೆ. ಮುಖ್ಯಮಂತ್ರಿಗಳ ಬೆಂಗಾವಲು ವಾಹನದ ಹಿಂದೆ  ಸಾಗುತ್ತಿದ್ದ ವೇಳೆ ಚಾಲಕನ ನಿಯಂತ್ರಣ ತಪ್ಪಿದ ಕಾರು ಸಿಎಂ ಬೆಂಗಾವಲು ವಾಹನಕ್ಕೆ ಡಿಕ್ಕಿಹೊಡೆದಿದೆ.

ಕಾರಿನಲ್ಲಿದ್ದ ಕೆಲವರಿಗೆ ಸಣ್ಣಪುಟ್ಟಗಾಯಗಳಾಗಿದ್ದು, ಹೆಚ್ಚಿನ ಅನಾಹುತ ಸಂಭವಿಸಿಲ್ಲ ಎಂದು ತಿಳಿದುಬಂದಿದೆ.

ಆದರೆ, ಅಪಘಾತವಾಗಿದ್ದು ಶಿವರಾಮ ಹೆಬ್ಬಾರ ಕಾರು ಎಂದು ಸುದ್ದಿಯಾಗಿತ್ತು. ಶಿವರಾಮ ಹೆಬ್ಬಾರ್ ಮುಖ್ಯಮಂತ್ರಿಗಳ ಕಾರಿನಲ್ಲೇ ಇದ್ದರು ಎಂದು ಅವರ ಆಪ್ತ ಕಾರ್ಯದರ್ಶಿ ಪ್ರಗತಿವಾಹಿನಿಗೆ ತಿಳಿಸಿದ್ದಾರೆ.
ಶೆಟ್ಟರ್ ಸಮಸ್ಯೆ ಬಗೆಹರಿಸುತ್ತೇನೆ ಎಂದ ಸಿಎಂ ಬೊಮ್ಮಾಯಿ

Home add -Advt

Related Articles

Back to top button