NationalPolitics

*ಮೆಘಾಲಯ ರಾಜ್ಯಪಾಲರಾಗಿ ಕರ್ನಾಟಕದ ಮಾಜಿ ಸಂಸದ ಸಿ.ಹೆಚ್ ವಿಜಯ್ ಶಂಕರ್ ನೇಮಕ*

ಪ್ರಗತಿವಾಹಿನಿ ಸುದ್ದಿ: ಕರ್ನಾಟಕದ ಮಾಜಿ ಸಂಸದ ಸಿ.ಹೆಚ್ ವಿಜಯ್ ಶಂಕರ್ ಅವರನ್ನು ಮೆಘಾಲಯ ನೂತನ ರಾಜ್ಯಪಾಲರನ್ನಾಗಿ ನೇಮಕ ಮಾಡಲಾಗಿದೆ.

ಮೆಘಾಲಯ ಸೇರಿದಂತೆ 10 ರಾಜ್ಯಗಳಿಗೆ ನೂತನ ರಾಜ್ಯಪಾಲರನ್ನು ನೇಮಕ ಮಾಡಿ ರಾಷ್ಟ್ರಪತಿ ದ್ರೌಪದಿ ಮುರ್ಮು ಆದೇಶ ಹೊರಡಿಸಿದ್ದಾರೆ.

ಮೆಘಾಲಯ ನೂತನ ರಾಜ್ಯಪಾಲರಾಗಿ ಸಿ.ಹೆಚ್.ವಿಜಯ್ ಶಂಕರ್ ಅವರನ್ನು ನೇಮಕ ಮಾಡಲಾಗಿದೆ. ವಿಜಯ್ ಶಂಕರ್ ಮೂಲತಃ ರಾಣೆಬೆನ್ನೂರಿನವರಾಗಿದ್ದು, 1994-98ರವರೆಗೆ ಹುಣಸೂರು ಕ್ಷೇತ್ರದಿಂದ ಶಾಸಕರಾಗಿ ಆಯ್ಕೆಯಾಗಿದ್ದರು. ಬಳಿಕ 1998 ಹಾಗೂ 2004ರಲ್ಲಿ ಮೈಸೂರು ಲೋಕಸಭಾ ಕ್ಷೇತ್ರದ ಸಂಸದರಾಗಿದ್ದರು.

2010ರಿಂದ 16ರವರೆಗೆ ವಿಧಾನ ಪರಿಷತ್ ಸದಸ್ಯರಾಗಿದ್ದರು. 2010ರಲ್ಲಿ ಕರ್ನಾಟಕದ ಮಂತ್ರಿ ಮಂಡಲದಲ್ಲಿ ಸಚಿವರಾಗಿದ್ದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button