Kannada NewsKarnataka NewsLatestPolitics

*BREAKING: ರಿಯಲ್ ಎಸ್ಟೇಟ್ ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಕೇಸ್: ತನಿಖೆಗೆ SITರಚನೆ*

ಪ್ರಗತಿವಾಹಿನಿ ಸುದ್ದಿ: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಪಿಡೆಂಟ್ ಗ್ರೂಪ್ ಚೇರ್ಮನ್ ಡಾ.ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ರಾಜ್ಯ ಸರ್ಕಾರ ಎಸ್ಐಟಿ ರಚನೆ ಮಾಡಿದೆ ಎಂದು ಗೃಹ ಸಚಿವ ಡಾ.ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಬೆಂಗಳೂರಿನಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವ ಪರಮೇಶ್ವರ್, ಉದ್ಯಮಿ ಸಿ.ಜೆ.ರಾಯ್ ಆತ್ಮಹತ್ಯೆ ಪ್ರಕರಣದ ತನಿಖೆಗೆ ಎಸ್ ಐಟಿ ರಚಿಸಲಾಗಿದೆ. ಹೆಚ್ಚುವರಿ ಪೊಲೀಸ್ ಆಯುಕ್ತ ವಂಶಿಕೃಷ್ಣ ನೇತೃತ್ವದಲ್ಲಿ ಎಸ್ ಐಟಿ ರಚನೆ ಮಾಡಲಾಗಿದೆ. ದಕ್ಷಿಣ ವಿಭಾಗದ ಡಿಸಿಪಿ ಲೋಕೇಶ್ ಕೂಡ ಈ ತಂಡದಲ್ಲಿ ಇರಲಿದ್ದಾರೆ ಎಂದು ತಿಳಿಸಿದರು.

ಸಿ.ಜೆ.ರಾಯ್ ಆತ್ಮಹತ್ಯೆಗೆ ಕಾರಣವೇನು? ಐಟಿ ದಾಳಿಯಿಂದಲೇ ಆತ್ಮಹತ್ಯೆ ಮಾಡಿಕೊಂಡರಾ? ಅಥವಾ ಬೇರೆ ಏನಾದರೂ ಕಾರಣವಿದೆಯೇ? ಎಂಬ ಬಗ್ಗೆ ಕೂಲಂಕುಷವಾಗಿ ತನಿಖೆ ನಡೆಸುವ ನಿಟ್ತಿನಲ್ಲಿ ಎಸ್ ಐಟಿ ರಚಿಸಲಾಗಿದೆ ಎಂದರು.

ಉದ್ಯಮಿ ಸಿ.ಜೆ.ರಾಯ್, ನಿನ್ನೆ ಬೆಂಗಳೂರಿನ ತಮ್ಮ ಕಚೇರಿಯಲ್ಲಿಯೇ ಚೇಂಬರ್ ನಲ್ಲಿ ಗುಂಡು ಹಾರಿಸಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದರು. ಐಟಿ ದಾಳಿಗೆ ಹೆದರಿ ಆತ್ಮಹತ್ಯೆಗೆ ಶರಣಾಗಿದ್ದಾರೆ ಎಂದು ಹೇಳಲಾಗುತ್ತಿದೆ.


ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button