Latest

ಲಾಕ್ ಡೌನ್: ಸಿಎಂ ಯಡಿಯೂರಪ್ಪ ಸ್ಪಷ್ಟನೆ

ಪ್ರಗತಿವಾಹಿನಿ ಸುದ್ದಿ; ಬೀದರ್: ರಾಜ್ಯದಲ್ಲಿ ಕೊರೊನಾ ಪ್ರಕರಣ ಹೆಚ್ಚುತ್ತಿರುವುದರಿಂದ ಮತ್ತೆ ಲಾಕ್ ಡೌನ್ ಜಾರಿಗೆ ಕೋವಿಡ್ ತಾಂತ್ರಿಕ ಸಲಹಾ ಸಮಿತಿ ಲಾಕ್ ಡೌನ್ ಸೂಚನೆ ನೀಡಿದೆ ಎಂಬ ಆರೋಗ್ಯ ಸಚಿವ ಡಾ.ಸುಧಾಕರ್ ಹೇಳಿಕೆಯನ್ನು ಸಿಎಂ ಯಡಿಯೂರಪ್ಪ ನಿರಾಕರಿಸಿದ್ದಾರೆ.

ಬೀದರ್ ನಲ್ಲಿ ಮಾತನಾಡಿದ ಸಿಎಂ ಬಿ.ಎಸ್.ಯಡಿಯೂರಪ್ಪ, ಕೋವಿಡ್ ತಾಂತ್ರಿಕಾ ಸಲಹಾ ಸಮಿತಿಯಲ್ಲಿ ನಾನೂ ಕೂಡ ಇದ್ದೇನೆ. ಸಮಿತಿ ಲಾಕ್ ಡೌನ್ ನಂತಹ ಯಾವುದೇ ಸೂಚನೆಯನ್ನು ನೀಡಿಲ್ಲ. ಅನಗತ್ಯವಾಗಿ ಏನೇನೋ ಹೇಳಿಕೆಗಳನ್ನು ನೀಡಬಾರದು. ಸಧ್ಯಕ್ಕೆ ರಾಜ್ಯದಲ್ಲಿ ಯಾವುದೇ ಲಾಕ್ ಡೌನ್ ಜಾರಿ ಮಾಡುವ ಪ್ರಶ್ನೆಯೇ ಇಲ್ಲ ಎಂದು ಸ್ಪಷ್ಟಪಡಿಸಿದರು.

ಜನರು ಹೆಚ್ಚು ಜಾಗೃತರಾಗಿ ಸೋಂಕು ತಡೆಯಲು ಮುನ್ನೆಚ್ಚರಿಕಾ ಕ್ರಮಗಳನ್ನು ಕೈಗೊಳ್ಳಬೇಕು. ಸ್ವಲ್ಪ ಮೈಮರೆತರೂ ಅಪಾಯ ತಪ್ಪಿದ್ದಲ್ಲ. ಇನ್ನು ಕೊರೊನಾ ನಿಯಂತ್ರಣಕ್ಕೆ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ಸರ್ವ ಪಕ್ಷ ಸಭೆ ಕರೆದು ನಿರ್ಧರಿಸಲಾಗುವುದು ಎಂದು ಹೇಳಿದರು.

ವಿಶ್ವದ ಮೊದಲ ಕೊರೊನಾ ವ್ಯಾಕ್ಸಿನ್ ಗೆ ಭಾರತದಲ್ಲೂ ಅನುಮತಿ

Home add -Advt

Related Articles

Back to top button