ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಕಾಂಗ್ರೆಸ್ ಹಿರಿಯ ನಾಯಕ, ವಿಧಾನ ಪರಿಷತ್ ಸದಸ್ಯ ಸಿ.ಎಂ.ಇಬ್ರಾಹಿಂ ಕಾಂಗ್ರೆಸ್ ಗೆ ಅಧಿಕೃತವಾಗಿ ರಾಜೀನಾಮೆ ನೀಡಿದ್ದಾರೆ.
ಬೆಂಗಳೂರಿನಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಸಿ.ಎಂ.ಇಬ್ರಾಹಿಂ, ನಾನು ಕಾಂಗ್ರೆಸ್ ಪಕ್ಷಕ್ಕೆ ರಾಜೀನಾಮೆ ನೀಡುತ್ತಿದ್ದೇನೆ. ಪರಿಷತ್ ಸದಸ್ಯ ಸ್ಥಾನಕ್ಕೂ ರಾಜೀನಮೆ ಕೊಡುತ್ತೇನೆ. ಕಾಂಗ್ರೆಸ್ ತೊರೆಯುತ್ತಿರುವುದಕ್ಕೆ ನೋವಿದೆ. ಇಂದು ಇಡೀ ಉತ್ತರ ಭಾರತದಲ್ಲಿ ಪಕ್ಷಕ್ಕೆ ನೆಲೆ ಇಲ್ಲದಂತಾಗಿದೆ. 1995ರಲ್ಲಿದ್ದ ಸ್ಥಿತಿಯಿದೆ. ನನ್ನ ರಾಜೀನಾಮೆ ಪತ್ರವನ್ನು ಸಿದ್ದರಾಮಯ್ಯನವರಿಗೂ ಕಳುಹಿಸುತ್ತೇನೆ. ಸ್ವೀಕರಿಸುವುದು ಬಿಡುವುದು ಅವರಿಗೆ ಬಿಟ್ಟದ್ದು ಎಂದರು. ನಾನು ಕಾಂಗ್ರೆಸ್ ಪಕ್ಷ ತೊರೆಯುತ್ತಿದ್ದು, ಶೀಘ್ರದಲ್ಲಿಯೇ ಪರಿಷತ್ ಸ್ಥಾನಕ್ಕೂ ರಾಜೀನಾಮೆ ನೀಡುತ್ತೇನೆ ಎಂದರು.
ನಾನು ಪಕ್ಷ ತೊರೆಯದಂತೆ ಹೇಳುವಂತೆ ಹಲವರನ್ನು ನನ್ನ ಬಳಿ ಕಳುಹಿಸಿದ್ದರು. ನಾನು ಎಲ್ಲಿಯೂ ಹೋಗಲ್ಲ ಎಂದಿದ್ದರು. ಸೋನಿಯಾ ಗಾಂಧಿ, ರಾಹುಲ್ ಗಾಂಧಿ, ಡಿ.ಕೆ.ಶಿವಕುಮಾರ್ ಅವರಿಗೆ ಧನ್ಯವಾದ ಹೇಳುತ್ತೇನೆ. ನನ್ನ ಜತೆಗೆ ಹಲವರು ಕಾಂಗ್ರೆಸ್ ತೊರೆಯಲಿದ್ದಾರೆ ಎಂದು ಹೇಳಿದರು.
ಇಂದು ಅಥವಾ ನಾಳೆ ಮಾಜಿ ಪ್ರಧಾನಿ, ಜೆಡಿಎಸ್ ವರಿಷ್ಠ ಹೆಚ್.ಡಿ.ದೇವೇಗೌಡ, ಮಾಜಿ ಸಿಎಂ ಕುಮಾರಸ್ವಾಮಿ, ರೇವಣ್ಣ ಜತೆ ಮಾತುಕತೆ ನಡೆಸುತ್ತೇನೆ. ನನ್ನ ಜತೆ ಅನೇಕರು ಜೆಡಿಎಸ್ ಸೇರಲಿದ್ದಾರೆ. ರಾಜ್ಯಾದ್ಯಂತ ಜೆಡಿಎಸ್ ಸಂಘಟನೆ ನಿಟ್ಟಿನಲ್ಲಿ ಶ್ರಮಿಸುತ್ತೇನೆ. ಇನ್ನೊಂದು ಸುತ್ತಿನ ಚರ್ಚೆ ಬಳಿಕ ಪಕ್ಷ ಸಂಘಟನೆಯ ಕುರಿತು ನಿರ್ಧಾರ ತಿಳಿಸುತ್ತೇನೆ ಎಂದರು.
ಪೇಟಿಎಂ ಬ್ಯಾಂಕ್ ಗೆ ಆರ್ ಬಿಐ ನಿರ್ಬಂಧ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ