ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪರಿಷತ್ ವಿಪಕ್ಷ ನಾಯಕನ ಸ್ಥಾನ ಕೈತಪ್ಪಿದ್ದಕ್ಕೆ ಕಾಂಗ್ರೆಸ್ ವಿರುದ್ಧ ತೀವ್ರ ಅಸಮಾಧಾನ ಹೊರಹಾಕಿದ್ದ ಹಿರಿಯ ನಾಯಕ ಸಿ.ಎಂ.ಇಬ್ರಾಹಿಂ ವಿಧಾನ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಿದ್ದಾರೆ.
ವಿಧಾನ ಪರಿಷತ್ ಸಭಾಪತಿ ಬಸವರಾಜ್ ಹೊರಟ್ಟಿಯವರನ್ನು ಭೇಟಿಯಾಗಿ ಸಿ.ಎಂ.ಇಬ್ರಾಹಿಂ, ರಾಜೀನಾಮೆ ಪತ್ರ ಸಲ್ಲಿಸಿದರು. ಇಬ್ರಾಹಿಂ ರಾಜೀನಾಮೆಯನ್ನು ಸಭಾಪತಿ ಹೊರಟ್ಟಿ ಅಂಗೀಕರಿಸಿದ್ದಾರೆ.
ಸಿ.ಎಂ.ಇಬ್ರಾಹಿಂ ಜೆಡಿಎಸ್ ಪಕ್ಷ ಸೇರುವ ಬಗ್ಗೆ ನಿರ್ಧರಿಸಿದ್ದು, ಈ ನಿಟ್ಟಿನಲ್ಲಿ ಈಗಾಗಲೇ ಜೆಡಿಎಸ್ ವರಿಷ್ಠ ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರನ್ನು ಹಾಗೂ ಮಾಜಿ ಸಿಎಂ ಹೆಚ್.ಡಿ.ಕುಮಾರಸ್ವಾಮಿಯನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಇನ್ನು ರಾಜೀನಾಮೆ ಬಳಿಕ ಮಾತನಾಡಿದ ಸಿ.ಎಂ.ಇಬ್ರಾಹಿಂ, ಪರಿಷತ್ ಸದಸ್ಯತ್ವಕ್ಕೆ ರಾಜೀನಾಮೆ ಕೊಟ್ಟಿದ್ದೇನೆ. ಈ ಮೂಲಕ ನನ್ನ ಮೇಲಿದ್ದ ಹೊರೆ ಇಳಿಸಿದ್ದೇನೆ. ಇಲ್ಲಿಂದ ಮುಂದಿನ ನಡೆ ಆರಂಭವಾಗಲಿದೆ. ಮಾಜಿ ಪ್ರಧಾನಿ ಹೆಚ್.ಡಿ.ದೇವೇಗೌಡರಿಗೆ ನನ್ನ ಮುಂದಿನ ನಡೆ ಬಿಟ್ಟಿದ್ದೇನೆ. ಅವರು ದೇಶಕ್ಕೆ ಮಾರ್ಗದರ್ಶನ ನೀಡಿದವರು, ಅಜಾತಶತ್ರುಗಳು ಹಾಗಾಗಿ ರಾಜಕೀಯದ ಮುಂದಿನ ನಡೆ ಬಗ್ಗೆ ಅವರೇ ತೀರ್ಮಾನಿಸುತ್ತಾರೆ ಎಂದಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ