
ಪ್ರಗತಿವಾಹಿನಿ ಸುದ್ದಿ; ರಾಮನಗರ: ಮೂರು ದಿನಗಳಿಂದ ನಾಪತ್ತೆಯಾಗಿರುವ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಅವರ ಭಾವ, ಮೆಗಾಸಿಟಿ ನಿರ್ದೇಶಕ ಮಹದೇವಯ್ಯ ಅವರನ್ನು ಸುಪಾರಿ ಕೊಟ್ಟು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಡಿಸೆಂಬರ್ 2ರಂದು ಮಹದೇವಯ್ಯ ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಚೆಕ್ಕೆರೆ ಗ್ರಾಮದ ತೋಟದ ಮನೆಯಿಂದ ಇದ್ದಕ್ಕಿದ್ದಂತೆ ನಾಪತ್ತೆಯಾಗಿದ್ದರು. ಇದೀಗ ಅವರ ಕಾರು ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನ ರಾಮಾಪುರ ಗ್ರಾಮದ ಬಳಿ ಪತ್ತೆಯಾಗಿದೆ. ಕಾರಿನ ಟೈ ಲ್ಯಾಂಪ್ ಬಳಿ ರಕ್ತದ ಕಲೆ ಇದೆ. ಅಲ್ಲದೇ ಮಹದೇವಯ್ಯನರನ್ನು ಮೂವರು ದುಷ್ಕರ್ಮಿಗಳು ಹತ್ಯೆ ಮಾಡಿರುವ ಶಂಕೆ ವ್ಯಕ್ತವಾಗಿದೆ.
ಕೃತ್ಯಕ್ಕೆ ಸಂಬಂಧಿಸಿದ ಸಿಸಿಟಿವಿ ಕ್ಯಾಮರಾವನ್ನು ಪೊಲೀಸರು ವಶಕ್ಕೆ ಪಡೆದು ಪರಿಶೀಲನೆ ನಡೆಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ