
ಪ್ರಗತಿವಾಹಿನಿ ಸುದ್ದಿ: ಬಿಜೆಪಿ ವಿಧಾನಪರಿಷತ್ ಸದಸ್ಯರಾದ ಸಿ.ಪಿ.ಯೋಗೇಶ್ವರ್ ಅವರು ವಿಧಾನ ಪರಿಷತ್ ಸ್ಥಾನಕ್ಕೆ ಇಂದು ರಾಜೀನಾಮೆ ಸಲ್ಲಿಸಲಿದ್ದಾರೆ
ಇಂದು ನಾಲ್ಕು ಗಂಟೆಗೆ ಹುಬ್ಬಳ್ಳಿಯಲ್ಲಿ ವಿಧಾನ ಪರಿಷತ್ ಸಭಾಪತಿ ಬಸವರಾಜ ಹೊರಟ್ಟಿ ಅವರನ್ನು ಭೇಟಿ ಮಾಡಿ ತಮ್ಮ ರಾಜೀನಾಮೆ ಪತ್ರವನ್ನು ನೀಡಲಿದ್ದಾರೆ.
ಚನ್ನಪಟ್ಟಣ ಉಪಚುನಾವಣಾ ಕ್ಷೇತ್ರಕ್ಕೆ ಸಿ.ಪಿ.ಯೋಗೇಶ್ವರ್ ಕಣಕ್ಕಿಳಿಯುವ ಸಾಧ್ಯತೆ ಇದೆ. ಈ ಹಿನ್ನೆಲೆಯಲ್ಲಿ ಪರಿಷತ್ ಸದಸ್ಯ ಸ್ಥಾನಕ್ಕೆ ರಾಜೀನಾಮೆ ನೀಡಲು ಮುಂದಾಗಿದ್ದಾರೆ.