Politics

*ಸಿ.ಪಿ.ಯೋಗೇಶ್ವರ್ ಅಧಿಕೃತವಾಗಿ ಕಾಂಗ್ರೆಸ್ ಗೆ ಮರುಸೇರ್ಪಡೆ*

ಪ್ರಗತಿವಾಹಿನಿ ಸುದ್ದಿ: ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಪಕ್ಷಕ್ಕೆ ಅಧಿಕೃತವಾಗಿ ಮರುಸೇರ್ಪಡೆಯಾಗಿದ್ದಾರೆ.

ಬೆಂಗಳೂರಿನ ಕೆಪಿಸಿಸಿ ಕಚೇರಿಯಲ್ಲಿ ಕೆಪಿಸಿಸಿ ಅಧ್ಯಕ್ಷರೂ ಆಗಿರುವ ಡಿಸಿಎಂ ಡಿ.ಕೆ.ಶಿವಕುಮಾರ್, ಪಕ್ಷದ ಬಾವುಟ ನೀಡುವ ಮೂಲಕ ಸಿ.ಪಿ.ಯೋಗೇಶ್ವರ್ ಅವರನ್ನು ಅಧಿಕೃತವಾಗಿ ಕಾಂಗ್ರೆಸ್ ಗೆ ಸೇರ್ಪಡೆ ಮಾಡಿಕೊಂಡರು.

ಈ ವೇಳೆ ಸಚಿವರಾದ ರಾಮಲಿಂಗಾರೆಡ್ಡಿ, ಜಮೀರ್ ಅಹ್ಮದ್, ಡಿ.ಕೆ.ಸುರೇಶ್, ಶಾಸಕರಾದ ಬಾಲಕೃಷ್ಣ, ರವಿ ಗಾಣಿಗ ಸೇರಿದಂತೆ ಹಲವರು ಉಪಸ್ಥಿತರಿದ್ದರು.

ಈ ವೇಳೆ ಮಾತನಾಡಿದ ಡಿಸಿಎಂ ಡಿ.ಕೆ.ಶಿವಕುಮಾರ್, ಸಿ,ಪಿ.ಯೋಗೇಶ್ವರ್ ನನ್ನ ಭೇಟಿಯಾಗಿ ನನ್ನ ರಾಜಕಾರಣ ಕಾಂಗ್ರೆಸ್ ಪಕ್ಷದಿಂದ ಶುರುವಾಗಿದೆ. ಕಾಂಗ್ರೆಸ್ ನಲ್ಲಿಯೇ ಮುಂದುವರೆಸಬೇಕು ಎಂಬ ಆಶಯಯಿದೆ ಎಂದರು. ಹಲವಾರು ವಿಚಾರಗಳ ಬಗ್ಗೆ ಚರ್ಚೆ ನಡೆಸಿದರು. ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಕಾಂಗ್ರೆಸ್ ವರಿಷ್ಠೆ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಹಿರಿಯ ನಾಯಕರ ಅನುಮತಿ ಪಡೆದು ಕಾಂಗ್ರೆಸ್ ಗೆ ಸೇರ್ಪಡೆಯಾಗಿದ್ದಾರೆ. ಯಾವುದೇ ಷರತ್ತುಗಳಿಲ್ಲದೇ ಪಕ್ಷದ ಸಿದ್ಧಾಂತ ಒಪ್ಪಿ ಸಿ.ಪಿ.ಯೋಗೇಶ್ವರ್ ಅವರು ಕಾಂಗ್ರೆಸ್ ಪಕ್ಷಕ್ಕೆ ಸೇರ್ಪಡೆಯಾಗಿದ್ದಾಗಿ ತಿಳಿಸಿದರು.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button