*ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತ..ಡಿಸಿಎಂ ಡಿಕೆಶಿ ನಿವಾಸದಲ್ಲಿ ಕಾಣಿಸಿಕೊಂಡ ಸೈನಿಕ*
ಪ್ರಗತಿವಾಹಿನಿ ಸುದ್ದಿ: ಮಾಜಿ ಸಚಿವ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗುವುದು ಬಹುತೇಕ ಖಚಿತವಾಗಿದೆ. ಇಂದು ಬೆಳಿಗ್ಗೆ ಡಿಸಿಎಂ ಡಿ.ಕೆ.ಶಿವಕುಮಾರ್ ಮನೆಯಲ್ಲಿ ಯೋಗೇಶ್ವರ್ ದಿಢೀರ್ ಪ್ರತ್ಯಕ್ಷವಾಗಿದ್ದಾರೆ. ಬಳಿಕ ಡಿ.ಕೆ.ಶಿವಕುಮಾರ್ ಹಾಗೂ ಯೋಗೇಶ್ವರ್ ಇಬ್ಬರೂ ಒಂದೇ ಕಾರಿನಲ್ಲಿ ಸಿಎಂ ಸಿದ್ದರಾಮಯ್ಯ ಅವರ ನಿವಾಸಕ್ಕೆ ತೆರಳಿದ್ದಾರೆ. ಈ ಮೂಲಕ ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆ ಖಚಿತವಾಗಿದೆ.Home add -Advt ಚನ್ನಪಟ್ಟಣ ಉಪಚುನಾವಣೆಗೆ ಎನ್ ಡಿಎ ಯಿಂದ ಟಿಕೆಟ್ ಸಿಗದ ಕಾರಣ ಸಿ.ಪಿ.ಯೋಗೇಶ್ವರ್ ಕಾಂಗ್ರೆಸ್ ಸೇರ್ಪಡೆಯಾಗಿ ಕಾಂಗ್ರೆಸ್ ಅಭ್ಯರ್ಥಿಯಾಗಿ ಸ್ಪರ್ಧಿಸುವ ಸಾಧ್ಯತೆ ಇದೆ.
Copy and paste this URL into your WordPress site to embed
Copy and paste this code into your site to embed