ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯದಲ್ಲಿ ನಾಯಕತ್ವ ಬದಲಾವಣೆ ಚರ್ಚೆ ಮತ್ತೆ ಮುನ್ನೆಲೆಗೆ ಬಂದಿದ್ದು, ಸಚಿವ ಸಿ.ಪಿ.ಯೋಗೇಶ್ವರ್ ವಿರುದ್ಧ ಕಿಡಿಕಾರಿರುವ ಸಿಎಂ ರಾಜಕೀಯ ಕಾರ್ಯದರ್ಶಿ ರೇಣುಕಾಚಾರ್ಯ, ಯೋಗೇಶ್ವರ್ ಓರ್ವ ’420’ ಎಂದು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ನಾಯಕತ್ವ ಬದಲಾವಣೆಯಾದರೆ ಬೆಂಕಿ ಹೊತ್ತಿ ಉರಿಯುತ್ತೆ. ನಾಯಕತ್ವ ಬದಲಾವಣೆ ಪ್ರಶ್ನೆಯೇ ಇಲ್ಲ. ಈ ವಿಚಾರದಲ್ಲಿ ನಾನು ರಾಜಕಾರಣ ಮಾಡಲ್ಲ ಎಂದರು.
ನಾಯಕತ್ವ ಬದಲಾವಣೆ ವಿಚಾರವಾಗಿ ಯೋಗೇಶ್ವರ್ ದೆಹಲಿಯಲ್ಲಿ ಬೀಡು ಬಿಟ್ಟಿದ್ದಾರೆ. ಸಿ.ಪಿ.ಯೋಗೇಶ್ವರ್ ಒಬ್ಬ ಕಳ್ಳ. ಮೆಗಾ ಸಿಟಿ ಯೋಜನೆಯಲ್ಲಿ ಏನೆಲ್ಲ ಹಗರಣ ಮಾಡಿದ್ದಾರೆ ಎಂಬುದು ಗೊತ್ತು. ಸೋತವರಿಗೆ ಮಂತ್ರಿ ಸ್ಥಾನ ನೀಡಿದ್ದಕ್ಕೆ ಈಗ ಕೋವಿಡ್ ನಂತಹ ದುಸ್ಥಿತಿಯಲ್ಲಿ ಜನಸೇವೆ ಮಾಡುವ ಬದಲು ರಾಜಕಾರಣ ಮಾಡುತ್ತಿದ್ದಾರೆ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಮನೆಯಲ್ಲಿ ಸಾವಾಗಿದೆ ಎಂದು ಅಧಿಕಾರಿಗಳನ್ನು ಯಾಮಾರಿಸಿ ಬಾಲ್ಯವಿವಾಹ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ