
ಪ್ರಗತಿವಾಹಿನಿ ಸುದ್ದಿ; ಶಿವಮೊಗ್ಗ: ರಾಜ್ಯ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಸಿ.ಎಸ್.ಷಡಕ್ಷರಿ ಅವರನ್ನು ವರ್ಗಾವಣೆ ಮಾಡಿ ಆದೇಶ ಹೊರಡಿಸಲಾಗಿದೆ.
ಸಿ.ಎಸ್.ಷಡಕ್ಷರಿ ಶಿವಮೊಗ್ಗ ಲೆಕ್ಕಾಧೀಕ್ಷಕರಾಗಿ ಕಾರ್ಯನಿರ್ವಹಿಸುತ್ತಿದ್ದರು. ಆದರೆ ಅವರ ವಿರುದ್ಧ ಅಧಿಕಾರ ದುರ್ಬಳಕೆ ಆರೋಪ ಕೇಳಿಬಂದ ಹಿನ್ನೆಲೆಯಲ್ಲಿ ಶಿವಮೊಗ್ಗದಿಂದ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಶಿವಮೊಗ್ಗ ಲೆಕ್ಕಾಧೀಕ್ಷಕ ಹುದ್ದೆಯಿಂದ ಕೋಲಾರದ ಸಮಾಜ ಕಲ್ಯಾಣ ಇಲಾಖೆ ಲೆಕ್ಕಾಧೀಕ್ಷಕ ಹುದ್ದೆಗೆ ಅವರನ್ನು ವರ್ಗಾವಣೆ ಮಾಡಲಾಗಿದೆ. ರಾಯಲ್ಟಿ ಪಾವತಿಸದೇ ಶಿವಮೊಗ್ಗದ ಅಬ್ಬಲಗೆರೆ ಕೆರೆಯಿಂದ ಅಕ್ರಮವಾಗಿ ಮಣ್ಣು ಸಾಗಿಸಿ ಸರ್ಕಾರದ ಬೊಕ್ಕಸಕ್ಕೆ 71,45,920 ರೂಪಾಯಿ ನಷ್ಟ ಉಂಟುಮಾಡಿದ್ದಾರೆ ಎಂಬ ಆರೋಪ ಕೇಳಿಬಂದಿತ್ತು. ಈ ಬಗ್ಗೆ ಶಿವಮೊಗ್ಗ ಜಿಲ್ಲಾ ಪಂಚಾಯಿತಿ ಕಾರ್ಯಪಾಲಕ ಇಂಜಿನಿಯರ್ ವರದಿಯನ್ನು ನೀಡಿದ್ದರು. ಈ ಹಿನ್ನೆಲೆಯಲ್ಲಿ ಜಿಲ್ಲಾ ಉಸ್ತುವಾರಿ ಸಚಿವ ಮಧು ಬಂಗಾರಪ್ಪ ಷಡಕ್ಷರಿ ಅವರ ವರ್ಗಾವಣೆ ಮಾಡುವಂತೆ ಸಿಎಂ ಸಿದ್ದರಾಮಯ್ಯ ಅವರಿಗೆ ಪತ್ರ ಬರೆದಿದ್ದರು. ಈ ಬೆಳವಣಿಗೆ ಬಳಿಕ ಷಡಕ್ಷರಿ ಅವರನ್ನು ಎತ್ತಂಗಡಿ ಮಾಡಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ