Politics

*ಸಿ.ಟಿ.ರವಿಗೆ CID ನೋಟಿಸ್: ವಿಚಾರಣೆಗೆ ಹಾಜರಾಗಲು ಸೂಚನೆ*

ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ತನಿಖೆ ಚುರುಕುಗೊಳಿಸಿರುವ ಸಿಐಡಿ, ಸಿ.ಟಿ.ರವಿಗೆ ನೋಟಿಸ್ ನೀಡಿದೆ.

ಇಂದು ಮಧ್ಯಾಹ್ನ 3 ಗಂಟೆಗೆ ಸಿಐಡಿ ಕಚೇರಿಗೆ ವಿಚಾರಣೆಗೆ ಹಾಜರಾಗುವಂತೆ ನೋಟಿಸ್ ನಲ್ಲಿ ತಿಳಿಸಲಾಗಿದೆ. ಈ ಹಿನ್ನೆಲೆಯಲ್ಲಿ ಸಿ.ಟಿ.ರವಿ ವಿಚಾರಣೆಗೆ ಹಾಜರಾಗುವ ಸಾಧ್ಯತೆ ಇದೆ.

ವಿಧಾನಪರಿಷತ್ ನಲ್ಲಿ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಮಾಡಿದ್ದ ಆರೋಪದಲ್ಲಿ ಸಿ.ಟಿ,ರವಿ ವಿರುದ್ಧ ಪ್ರಕರಣ ದಾಖಲಾಗಿತ್ತು. ಈ ಹಿನ್ನೆಲೆಯಲ್ಲಿ ಪೊಲೀಸರು ಸಿ.ಟಿ.ರವಿಯನ್ನು ಬಂಧಿಸಿದ್ದರು. ಪ್ರಕರಣದಲ್ಲಿ ದೂರು, ಪ್ರತಿ ದೂರು ದಾಖಲಾಗಿತ್ತು. ಪ್ರಕರಣದ ತನಿಖೆಯನ್ನು ರಾಜ್ಯ ಸರ್ಕಾರ ಸಿಐಡಿಗೆ ವಹಿಸಿ ಆದೇಶ ಹೊರಡಿಸಿತ್ತು. ಈ ಹಿನ್ನೆಲೆಯಲ್ಲಿ ಸಿಐಡಿ ಅಧಿಕಾರಿಗಳು ತನಿಖೆ ಚುರುಕುಗೊಳಿಸಿದ್ದು, ಸಿ.ಟಿ.ರವಿ ಅವರಿಗೆ ನೋಟಿಸ್ ನೀಡಿದ್ದಾರೆ.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button