Politics

*ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಕೇಸ್: CID ತನಿಖೆಗೆ ಗೃಹ ಸಚಿವರಿಂದ ಆದೇಶ*

ಪ್ರಗತಿವಾಹಿನಿ ಸುದ್ದಿ: ಮಹಿಳಾ ಮತ್ತು ಮಕ್ಕಳ ಕಲ್ಯಾಣ ಇಲಾಖೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಬಿಜೆಪಿ ಎಂಎಲ್ ಸಿ ಸಿ.ಟಿ.ರವಿ ಆಕ್ಷೇಪಾರ್ಹ ಪದ ಬಳಕೆ ಪ್ರಕರಣವನ್ನು ಸಿಐಡಿ ತನಿಖೆಗೆ ಆದೇಶಿಸಲಾಗಿದೆ ಎಂದು ಗೃಹ ಸಚಿವ ಡಾ. ಜಿ.ಪರಮೇಶ್ವರ್ ತಿಳಿಸಿದ್ದಾರೆ.

ಹುಬ್ಬಳ್ಳಿಯಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಗೃಹ ಸಚಿವರು, ಸಿ.ಟಿ.ರವಿ ಅಶ್ಲೀಲ ಪದ ಬಳಕೆ ಕೇಸ್ ನ್ನು ಈಗಾಗಲೇ ನಾನು ಸಿಐಡಿ ತನಿಖೆಗೆ ಆದೇಶ ನೀಡಿದ್ದೇನೆ. ತನಿಖೆಯಾಗಲಿ ಎಂದು ಹೇಳಿದರು.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ದೂರು ನೀಡಿದ್ದಾರೆ. ಸಿ.ಟಿ.ರವಿ ನಾನು ಆ ಪದ ಬಳಸಿಲ್ಲ ಎನ್ನುತ್ತಿದ್ದಾರೆ.ವಿಧಾನ ಪರಿಷತ್ ಸಭಾಪತಿಗಳು ಅವರ ಕೆಲಸ ಮಾಡಿದ್ದಾರೆ. ಈ ಪ್ರಕರಣದ ಬಗ್ಗೆ ಪೊಲಿಸರು ತನಿಖೆ ನಡೆಸಬೇಕು. ಈಗ ಸಿಐಡಿ ತನಿಖೆಗೆ ಆದೇಶ ನೀಡಲಾಗಿದೆ. ತನಿಖೆ ನಡೆಯುವಾಗ ಹೆಚ್ಚು ಮಾತನಾಡೋದು ಸರಿಯಲ್ಲ ಎಂದರು.

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button