Latest

ಬಿಎಸ್ ವೈಗೆ ಟಾಂಗ್ ನೀಡಿದ ಸಿ.ಟಿ.ರವಿ

ಪ್ರಗತಿವಾಹಿನಿ ಸುದ್ದಿ; ಪಣಜಿ: ಸಿಎಂ ಯಡಿಯೂರಪ್ಪನವರಿಗೆ ಪಕ್ಷ ಸಾಕಷ್ಟು ಅವಕಾಶ ನೀಡಿದೆ. ಹೈಕಮಾಂಡ್ ಸೂಚನೆಯನ್ನು ಎಲ್ಲರೂ ಪಾಲಿಸಬೇಕು ಎಂದು ಹೇಳುವ ಮೂಲಕ ಬಿಜೆಪಿ ರಾಶ್ಟ್ರೀಯ ಪ್ರಧಾನ ಕಾರದರ್ಶಿ ಸಿ.ಟಿ.ರವಿ ಪರೋಕ್ಷವಾಗಿ ಬಿಎಸ್ ವೈಗೆ ಟಾಂಗ್ ನೀಡಿದ್ದಾರೆ.

ಗೋವಾದಲ್ಲಿ ಮಾತನಾಡಿದ ಸಿ.ಟಿ.ರವಿ, ಸಿಎಂ ಯಡಿಯೂರಪ್ಪ ಜನಪ್ರಿಯ ನಾಯಕ ಎಂಬುದರಲ್ಲಿ ಯಾವುದೆ ಸಂಸಯವಿಲ್ಲ. ಬಿಎಸ್ ವೈಗೆ ಪಕ್ಷ ಸಾಕಷ್ಟು ಅವಕಾಶ ನೀಡಿದೆ. 4 ಬಾರಿ ಮುಖ್ಯಮಂತ್ರಿಯಾಗಿ ಜನಸೇವೆ ಮಾಡುವ ಅವಕಾಶ ಕೊಡಲಾಗಿದೆ. ವಿಪಕ್ಷನಾಯಕನಾಗಿ, ಉಪಮುಖ್ಯಮಂತ್ರಿಯಾಗಿಯೂ ಕಾರ್ಯ ನೀರ್ವಹಿಸಿದ್ದಾರೆ.ಇಷ್ಟೊಂದು ಅವಕಾಶವನ್ನು ಬೇರೆ ಯಾವುದೇ ಪಕ್ಷದಲ್ಲಿ ಯಾರಿಗೂ ನೀಡಲ್ಲ ಎಂದು ಹೇಳಿದರು.

ಹೈಕಮಾಂಡ್ ಸೂಚನೆಯನ್ನು ಎಲ್ಲರೂ ಪಾಲಿಸಬೇಕು. ವರಿಷ್ಠರು ತೆಗೆದುಕೊಳ್ಳುವ ನಿರ್ಧಾರಕ್ಕೆ ಬದ್ಧರಾಗಬೇಕು ಎಂದು ಹೇಳುವ ಮೂಲಕ ಯಡಿಯೂರಪ್ಪನವರಿಗೆ ಸಿ.ಟಿ.ರವಿ ಪರೋಕ್ಷವಾಗಿ ಸೂಚನೆ ನೀಡಿದ್ದಾರೆ ಎನ್ನಲಾಗಿದೆ.
ಸಂತ್ರಸ್ತರಿಗೆ ಪರ್ಯಾಯ ವ್ಯವಸ್ಥೆಗೆ ಕ್ರಮ: ಬಿ.ಎಸ್.ಯಡಿಯೂರಪ್ಪ ಭರವಸೆ

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button