ಪ್ರಗತಿವಾಹಿನಿ ಸುದ್ದಿ: ಮುಖ್ಯಮಂತ್ರಿ ಸಿದ್ದರಾಮಯ್ಯ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಆರೋಪದಲ್ಲಿ ವಿಧಾನ ಪರಿಷತ್ ಸದಸ್ಯ ಸಿ.ಟಿ.ರವಿ ವಿರುದ್ಧ ದೂರು ದಾಖಲಾಗಿದೆ.
ಹುಬ್ಬಳ್ಳಿಯ ಉಪನಗರ ಪೊಲೀಸ್ ಠಾಣೆಯಲ್ಲಿ ರಾಜ್ಯ ಬಾಲವಿಕಾಸ ಅಕಾಡೆಮಿ ಮಾಜಿ ಅಧ್ಯಕ್ಷ ವೇದವ್ಯಾಸ ಕೌಲಗಿ ಸಿ.ಟಿ.ರವಿ ವಿರುದ್ಧ ಮಾನನಷ್ಟ ಕೊಕದ್ದಮೆ ಹೂಡುವಂತೆ ದೂರು ದಾಖಲಿಸಿದ್ದಾರೆ.
ಪೆಟ್ರೋಲ್, ಡೀಸೆಲ್ ದರ ಏರಿಕೆ ಖಂಡಿಸಿ ನಿನ್ನೆ ಬೆಂಗಳೂರಿನ ಫ್ರೀಡಂ ಪಾರ್ಕ್ ನಲ್ಲಿ ನಡೆದಿದ್ದ ಬಿಜೆಪಿ ಪ್ರತಿಭಟನೆ ವೇಳೆ ಮಾತನಾಡಿದ ಸಿ.ಟಿ.ರವಿ ಸಿಎಂ ಸಿದ್ದರಾಮಯ್ಯ ವಿರುದ್ಧ ವಾಗ್ದಾಳಿ ನಡೆಸಿದ್ದರು. ಈ ವೇಳೆ ಮೂರು ಬಿಟ್ಟವರು ಭಂಡತನದ ಸಮರ್ಥನೆ ಮಾಡುವುದು. ಭಂಡತನ ಸಮರ್ಥನೆ ಬಿಟ್ಟು ಯಾಕೆ ಸೆಸ್ ಹಾಕಿದ್ದಾರೆ ಎಂದು ಹೇಳಲಿ ಎಂದು ಕಿಡಿಕಾರಿದ್ದರು. ಸಿಎಂ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ ಹಿನ್ನೆಲೆಯಲ್ಲಿ ಪ್ರಕರಣ ದಾಖಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ