
ಪ್ರಗತಿವಾಹಿನಿ ಸುದ್ದಿ; ನವದೆಹಲಿ: ಸಿಎಂ ಬಿ.ಎಸ್.ಯಡಿಯೂರಪ್ಪ ಬದಲಾವಣೆ ಮಾತುಗಳು ಕೇಳಿಬರುತ್ತಿರುವ ಬೆನ್ನಲ್ಲೇ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತದೆ ಎಂದು ಮಾರ್ಮಿಕವಾಗಿ ಉತ್ತರಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸಿ.ಟಿ.ರವಿ, ಸಿಎಂ ಯಡಿಯೂರಪ್ಪ 4 ಬಾರಿ ಮುಖ್ಯಮಂತ್ರಿಯಾಗಿ ಆಡಳಿತ ನಡೆಸಿದ್ದಾರೆ. ಇಂದು ರಾಜ್ಯ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಎರಡು ವರ್ಷ ಪೂರೈಸಿರುವುದಕ್ಕೆ ಅಭಿನಂದನೆ ಸಲ್ಲಿಸುತ್ತೇನೆ. ಆರ್ಥಿಕ ಸಂಕಷ್ಟದ ನಡುವೆಯೂ ಯಡಿಯೂರಪ್ಪ ಉತ್ತಮ ಕೆಲಸಗಳನ್ನು ಮಾಡಿದ್ದಾರೆ. ಬದಲಾವಣೆ ವಿಚಾರವಾಗಿ ದಿನಕ್ಕೊಂದು ಸುದ್ದಿ ಬರುತ್ತೆ, ಎಲ್ಲದಕ್ಕೂ ಉತ್ತರ ನೀಡಲು ಆಗುತ್ತಾ? ಎಂದು ಪ್ರಶ್ನಿಸಿದರು.
ರಾಜ್ಯ ಬಿಜೆಪಿಯಲ್ಲಿ ಯಾವುದೇ ರೀತಿಯ ಗೊಂದಲಗಳೂ ಇಲ್ಲ. ಸಿಎಂ ಯಡಿಯೂರಪ್ಪ 2 ವರ್ಷ ಚನ್ನಾಗಿ ಕೆಲಸ ಮಾಡಿದ್ದಾರೆ ಎಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ.ನಡ್ಡಾ ಅವರೇ ಈ ಬಗ್ಗೆ ಸ್ಪಷ್ಟಪಡಿಸಿದ್ದಾರೆ. ಪಕ್ಷ ನೀಡಿದ ಜವಾಬ್ದಾರಿಯನ್ನು ನಾವೆಲ್ಲರೂ ನಿರ್ವಹಿಸುತ್ತೇವೆ. ಎಲ್ಲಾ ಸುದ್ದಿಗಳಿಗೂ ಪ್ರತಿಕ್ರಿಯೆ ನೀಡುತ್ತಿರಲು ಸಾಧ್ಯವಿಲ್ಲ, ಎಲ್ಲವನ್ನೂ ಕಾಲವೇ ನಿರ್ಣಯಿಸುತ್ತೆ ಎಂದು ಹೇಳಿದರು.
ರಾಜಭವನಕ್ಕೆ ವಿಶ್ವೇಶ್ವರ ಹೆಗಡೆ ಕಾಗೇರಿ ಭೇಟಿ