
ಪ್ರಗತಿವಾಹಿನಿ ಸುದ್ದಿ: ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಆಕ್ಷೇಪಾರ್ಹ ಪದ ಬಳಕೆ ಪ್ರಕರಣಕ್ಕೆ ಸಂಬಂಧಿಸಿದಂತೆ ವಿಧಾನಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಬಂಧನ ಕೇಸ್ ಗೆ ಸಂಬಂಧಿಸಿದಂತೆ ಸಿ.ಟಿ.ರವಿ ಮಾನವ ಹಕ್ಕುಗಳ ಆಯೋಗಕ್ಕೆ ದೂರು ಸಲ್ಲಿಸಿದ್ದಾರೆ.
ಸಿ.ಟಿ.ರವಿ ಬಂಧನದ ವೇಳೆ ಪೊಲೀಸ್ ದೌರ್ಜನ್ಯ, ಅಧಿಕಾರಿಗಳು ಭಾಗಿ ಸೇರಿದಂತೆ ಹಲವು ಆರೋಪ ಮಾಡಿ ಇ-ಮೇಲ್ ಮೂಲಕ 13 ಪುಟಗಳ ದೂರು ಸಲ್ಲಿಸಿದ್ದಾರೆ.
ದೂರಿನಲ್ಲಿ ಡಿಸಿಎಂ ಡಿ.ಕೆ.ಶಿವಕುಮಾರ್, ಸಚಿವೆ ಲಕ್ಷ್ಮೀ ಹೆಬ್ಬಾಳಕರ್, ಪರಿಷತ್ ಸದಸ್ಯ ಚನ್ನರಾಜ ಹಟ್ಟಿಹೊಳಿ, ಬಸವನಗೌಡ ಬಾದರ್ಲಿ, ರಾಜ್ಯ ಸರ್ಕಾರದ ಮುಖ್ಯಕಾರ್ಯದರ್ಶಿ, ಗೃಹ ಇಲಾಖೆ ಕಾರ್ಯದರ್ಶಿ ಹಾಗೂ ಅವರ ಪಿಎಗಳು ಹಾಗೂ ಹಿರೇಬಾಗೇವಾಡಿ ಸಿಪಿಐ ರಾಜು ಪಾಟೀಲ್ ಹೆಸರು ಹೂಡ ಉಲ್ಲೇಖಿಸಿದ್ದಾರೆ ಎಂದು ತಿಳಿದುಬಂದಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ