Kannada NewsKarnataka NewsLatest

ಸಿ.ಟಿ.ರವಿಯಲ್ಲ ಆತ ಲೂಟಿ ರವಿ; ಡಿಕೆಶಿ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ನಡೆಯುತ್ತಿರುವ ಚಳಿಗಾಲದ ಅಧಿವೇಶನ ಆಡಳಿತ ಹಾಗೂ ವಿಪಕ್ಷ ನಾಯಕರ ನಡುವಿನ ಪರಸ್ಪರ ವಾಕ್ಸಮರಕ್ಕೂ ಕಾರಣವಾಗಿದೆ.

ಸುವರ್ಣಸೌಧದ ಎದುರು ಕಾಂಗ್ರೆಸ್ ಹಮ್ಮಿಕೊಂಡಿರುವ ಬೃಹತ್ ಪ್ರತಿಭಟನೆಯಲ್ಲಿ ಮಾತನಾಡಿದ ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್, ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ವಿರುದ್ಧ ವಾಗ್ದಾಳಿ ನಡೆಸಿದರು. ಸಿ.ಟಿ ರವಿ ಅಲ್ಲ, ಅವರು ಲೂಟಿ ರವಿ ಎಂದು ಕಿಡಿ ಕಾರಿದರು.

Home add -Advt

ಈ ಹಿಂದೆ ಸಿ.ಟಿ.ರವಿ ಹೇಗಿದ್ದ. ಈಗ ಹೇಗಾಗಿದ್ದಾನೆ ಅಂತಾ ಹೇಳಲಿ ಎಂದು ಏಕವಚನದಲ್ಲಿ ವಾಕ್ಪ್ರಹಾರ ನಡೆಸಿದ್ದಾರೆ. ಚಿಕ್ಕಮಗಳೂರಿನಲ್ಲಿ ಚುನಾವಣೆಯಲ್ಲಿ ಸ್ವಲ್ಪ ಯಾಮಾರಿದರೂ ಏನಾಗುತ್ತಿತ್ತು ಎಂಬುದು ಗೊತ್ತಾಗುತ್ತಿತ್ತು ಎಂದು ಡಿ.ಕೆ.ಶಿವಕುಮಾರ್ ತಿಳಿಸಿದ್ದಾರೆ.
ಕಂದಾಯ ಅಧಿಕಾರಿ ಆತ್ಮಹತ್ಯೆಗೆ ಶರಣು

Related Articles

Back to top button