Latest

ಕಾಂಗ್ರೆಸ್ ಕಚೇರಿಗಳಲ್ಲಿ ಹುಕ್ಕಾ ಬಾರ್ ತೆರೆಯಲಿ ಎಂದ ಸಿ.ಟಿ ರವಿ

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಚಿವ ಕೆ.ಎಸ್.ಈಶ್ವರಪ್ಪ ಬೆನ್ನಲ್ಲೇ ಇದೀಗ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ ವಿವಾದಾತ್ಮಕ ಹೇಳಿಕೆ ನೀಡಿದ್ದು, ಕಾಂಗ್ರೆಸ್ ಕಚೇರಿಗಳಲ್ಲಿ ಹುಕ್ಕಾ ಬಾರ್ ತೆರೆಯಲಿ ಎಂದು ವ್ಯಂಗ್ಯವಾಡಿದ್ದಾರೆ.

ಬೆಂಗಳೂರಿನಲ್ಲಿ ಮಾತನಾಡಿದ ಸಿ.ಟಿ.ರವಿ, ಕಾಂಗ್ರೆಸ್ ನವರು ತಮ್ಮ ಕಚೇರಿಗಳಲ್ಲಿ ಇಂದಿರಾ ಕ್ಯಾಂಟೀನ್ ಆದರೂ ಮಾಡಲಿ, ಇಲ್ಲ ನೆಹರು ಹೆಸರಲ್ಲಿ ಹುಕ್ಕಾ ಬಾರ್ ಬೇಕದಾರೂ ತೆರೆಯಲಿ. ಆದರೆ ರಾಜ್ಯದಲ್ಲಿರುವ ಇಂದಿರಾ ಕ್ಯಾಂಟೀನ್ ಹೆಸರನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಬದಲಿಸಬೇಕು ಎಂಬುದು ನಮ್ಮ ಆಗ್ರಹ. ಈ ನಿಟ್ಟಿನಲ್ಲಿ ನಮ್ಮ ಪ್ರಯತ್ನ ನಡೆಯಬೇಕಿದೆ ಎಂದರು.

Home add -Advt

ಅವರ ಎಟಿಎಂ ತುಂಬಿಸಿಕೊಳ್ಳಲು ಇಂದಿರಾ ಗಾಂಧಿ ಹೆಸರಲ್ಲಿ ಕ್ಯಾಂಟೀನ್ ತೆಗೆದುಕೊಂಡಿದ್ದಾರಾ? ಇವರಿಗೆ ಬೇಕೆಂದರೆ ನೆಹರು ಹೆಸರಲ್ಲಿ ಹುಕ್ಕಾ ಬಾರ್ ತೆಗೆದುಕೊಳ್ಳಲಿ. ಯಾರು ಬೇಡ ಅಂತಾರೆ. ಆದರೆ ರಾಜ್ಯದ ಜನರಿಗೆ ರಾಜಕಾರಣದ ಹೆಸರಲ್ಲಿ ವಂಚನೆಯಾಗಬಾರದು ಆ ಕಾರಣಕ್ಕೆ ಇಂದಿರಾ ಕ್ಯಾಂಟೀನ್ ನ್ನು ಅನ್ನಪೂರ್ಣೇಶ್ವರಿ ಕ್ಯಾಂಟೀನ್ ಎಂದು ಹೆಸರು ಬದಲಿಸಬೇಕು ಎಂದು ಹೇಳಿದ್ದು ಎಂದಿದ್ದಾರೆ.

ಇದೇ ವೇಳೆ ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಕಿಡಿಕಾರಿದ ಸಿ.ತಿ.ರವಿ, ನಮ್ಮ ರಾಜಕೀಯ ವಿರೋಧಿಗಳು ಹಳೇ ಗ್ರಾಮಫೋನ್ ತಿರುಗಿಸುತ್ತಿದ್ದಾರೆ. ಅಂಬೇಡ್ಕರ್ ಅವರನ್ನು ಎರಡು ಬಾರಿ ಸೋಲಿಸಿದ್ದು ನಾವಲ್ಲ ಕಾಂಗ್ರೆಸ್, ಸಿದ್ದರಾಮಯ್ಯನವರು ತಮ್ಮ ಸಾಫ್ಟ್ ವೇರ್ ಅಪ್ಡೇಟ್ ಮಾಡಿಕೊಳ್ಳಬೇಕು ಎಂದು ಸಲಹೆ ನೀಡಿದರು.

ಬೆಳಗಾವಿ, ಕಾರವಾರ ಮಹಾರಾಷ್ಟ್ರಕ್ಕೆ ಸೇರಿಸಿ; ಮತ್ತೆ ಕ್ಯಾತೆ ತೆಗೆದ ಪವಾರ್

 

Related Articles

Back to top button