Karnataka NewsLatestPolitics

*ಸಿ.ಟಿ.ರವಿ ವಿರುದ್ಧದ ಕೇಸ್: ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆ*

ಪ್ರಗತಿವಾಹಿನಿ ಸುದ್ದಿ: ನೀಟ್ ಪರೀಕ್ಷೆ ಅಕ್ರಮದ ವಿರುದ್ಧ ನಡೆಯುತ್ತಿದ್ದ ಪ್ರತಿಭಟನೆ ವೇಳೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಮುಲ್ಲಾಗಳಿಗೂ ನೀಟ್ ಗೂ ಏನು ಸಂಬಂಧ? ಎದೆ ಸೀಳಿದರೆ ಮೂರಕ್ಷರವಿಲ್ಲ. ಅವರು ಬಂದು ಪ್ರತಿಭಟನೆ ಮಾಡುವುದಂತೆ ಪ್ರಧಾನ್ ರಾಜೀನಾಮೆ ಕೇಳುವುದಂತೆ ಮೋದಿ ಹಠಾವೋ ಎನ್ನುವುದಂತೆ ಎಂದು ಹೇಳುವ ಮೂಲಕ ವಿವಾದ ಸೃಷ್ಟಿಸಿದ್ದರು.

ಈ ಹಿನ್ನೆಲೆಯಲ್ಲಿ ಸಿ.ಟಿ.ರವಿ ವಿರುದ್ಧ ಎಫ್ ಐ ಆರ್ ದಾಖಲಾಗಿತ್ತು. ಇದೀಗ ಸಿ.ಟಿ.ರವಿ ವಿರುದ್ಧದ ಪ್ರಕರಣ ಬೆಂಗಳೂರಿನ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯಕ್ಕೆ ವರ್ಗಾವಣೆಯಾಗಿದೆ.

Home add -Advt

ಮತ್ತೊಂದೆಡೆ ಎಫ್‌ಐಆರ್‌ಗೆ ತಡೆ ಕೋರಿ ಸಿ.ಟಿ.ರವಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ. ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಯಲ್ಲಿ ದಾಖಲಾಗಿದ್ದ ಎಫ್‌ಐಆರ್ ಪ್ರಕರಣದ ಪ್ರತಿಯೊಂದಿಗೆ, ಎಫ್‌ಐಆರ್ ನಂತರ ನಡೆದ ಎಲ್ಲ ಬೆಳವಣಿಗೆಗಳ ಸಮಗ್ರ ವರದಿಯನ್ನು ಬೆಂಗಳೂರಿನ ಜನಪ್ರತಿನಿಧಿಗಳ ನ್ಯಾಯಾಲಯಕ್ಕೆ ಸಲ್ಲಿಸಲಾಗುತ್ತಿದೆ. ಈ ಸಂಬಂಧ ಚಿಕ್ಕಮಗಳೂರು ನಗರ ಠಾಣೆಯ ಪೊಲೀಸ್ ಇನ್ಸ್‌ಪೆಕ್ಟರ್ ಅಭಯ್ ಪ್ರಕಾಶ್ ಬೆಂಗಳೂರಿಗೆ ತೆರಳಿದ್ದಾರೆ.

ಈ ಮಧ್ಯೆ ತಮ್ಮ ವಿರುದ್ಧ ದಾಖಲಾಗಿರುವ ಎಫ್‌ಐಆರ್ ಸಂಖ್ಯೆ 149ಕ್ಕೆ ತಡೆ ನೀಡುವಂತೆ ಕೋರಿ ಸಿ.ಟಿ ರವಿ ಪರ ವಕೀಲರು ಹೈಕೋರ್ಟ್‌ನಲ್ಲಿ ಅರ್ಜಿ ಸಲ್ಲಿಸಿದ್ದಾರೆ. ಚಿಕ್ಕಮಗಳೂರು ನಗರ ಠಾಣೆಯಲ್ಲಿ ಭಾರತೀಯ ನ್ಯಾಯ ಸಂಹಿತೆ (BNS) ಸೆಕ್ಷನ್ 353(2) ಅಡಿಯಲ್ಲಿ ದಾಖಲಾದ ಪ್ರಕರಣಕ್ಕೆ ಮಧ್ಯಂತರ ತಡೆ ನೀಡುವಂತೆ ಮನವಿ ಮಾಡಲಾಗಿದೆ.

Related Articles

Back to top button