Karnataka NewsLatestPolitics

*ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲು*

ಪ್ರಗತಿವಾಹಿನಿ ಸುದ್ದಿ: ವಿಧಾನ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ವಿರುದ್ಧ ಎಫ್ಐಆರ್ ದಾಖಲಾಗಿದೆ.

ಎದೆ ಸೀಳಿದರೆ ಮೂರು ಅಕ್ಷರ ಬರಲ್ಲ. ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನ್ ಸಂಬಂಧ? ಎಂಬ ಹೇಳಿಕೆ ನೀಡುವ ಮೂಲಕ ವಿವಾದಕ್ಕೆ ಕಾರಣರಾಗಿದ್ದ ಸಿ.ಟಿ.ರವಿ ವಿರುದ್ಧ ಚಿಕ್ಕಮಗಳೂರು ನಗರ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Home add -Advt

ಚಿಕ್ಕಮಗಳೂರಿನ ಆಜಾದ್ ಪಾರ್ಕ್ ವೃತ್ತದಲ್ಲಿ ಆಯೋಜಿಸಿದ್ದ ಪ್ರತಿಭಟನಾ ಸಭೆಯಲ್ಲಿ ಮಾತನಾಡಿದ್ದ ಸಿ.ಟಿ.ರವಿ, ನೀಟ್ ಪ್ರಶ್ನೆ ಪತ್ರಿಕೆ ಸೋರಿಕೆ ಸಂಬಂಧ ಸಂಸತ್ ಭವನದ ಬಳಿ ನಡೆದ ಪ್ರತಿಭಟನೆಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸುವ ಸಂದರ್ಭದಲ್ಲಿ ಮುಸ್ಲಿಂ ಸಮುದಾಯದವನ್ನ ಉದ್ದೇಶಿಸಿ ನೀಟ್ ಪರೀಕ್ಷೆಗೂ ಮುಲ್ಲಾಗಳಿಗೂ ಏನು ಸಂಬಂಧ? ಅವರ ಎದೆ ಸೀಳಿದರೆ ಮೂರು ಅಕ್ಷರವೂ ಇಲ್ಲ. ಅಂತಹವರು ನೀಟ್ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಧರ್ಮೇಂದ್ರ ಪ್ರಧಾನ್ ರಾಜೀನಾಮೆ ಕೊಡಬೇಕಂತೆ, ಮೋದಿ ಹಠವೋ ಅಂತೆ. ಅವರಿಗೂ ನೀಟ್ ಪ್ರಶ್ನೆ ಪತ್ರಿಕೆ ಲೀಕ್ ಆಗಿದ್ದಕ್ಕೂ ಏನ್‌ ಸಂಬಂಧ? ಎಂದು ಪ್ರಶ್ನಿಸಿದ್ದರು.

ಮುಸ್ಲಿಂ ಸಮುದಾಯವನ್ನ ನಿಂದಿಸಿ ಸಮಾಜದಲ್ಲಿ ದ್ವೇಷ ಮತ್ತು ಅಶಾಂತಿ ಎಬ್ಬಿಸಲು ಯತ್ನಿಸಲಾಗಿದೆ ಎಂದು ಜಾಮೀಯ ಮಸೀದಿ ಅಧ್ಯಕ್ಷ ಮುದಾಸೀರ್ ಪಾಷಾ ಸಿ.ಟಿ. ರವಿ ವಿರುದ್ಧ ಚಿಕ್ಕಮಗಳೂರು ನಗರ ಪೊಲೀಸ್ ಠಾಣೆಗೆ ದೂರು ನೀಡಿದ್ದಾರೆ. ದ್ವೇಷ ಭಾಷಣ ಮಾಡಿದ ಹಿನ್ನೆಲೆಯಲ್ಲಿ ಸಿ.ಟಿ. ರವಿ ಅವರ ವಿರುದ್ಧ ಎಫ್ಐಆರ್ ದಾಖಲಾಗಿದೆ.


Related Articles

Back to top button