Belagavi NewsBelgaum NewsPolitics

*ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅವಾಚ್ಯ ಶಬ್ಧಗಳಿಂದ ನಿಂದನೆ: ಸಭಾಪತಿಗೆ ದೂರು ನೀಡಿದ ಕಾಂಗ್ರೆಸ್ ನಾಯಕರು*

ಪ್ರಗತಿವಾಹಿನಿ ಸುದ್ದಿ: ವಿಧಾನಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ನಾಯಕರು ಪ್ರತಿಭಟನೆ ನಡೆಸುತ್ತಿದ್ದ ವೇಳೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ.ರವಿ ಅವಾಚ್ಯ ಶಬ್ಧಗಳಿಂದ ನಿಂದಿಸಿರುವ ಘಟನೆ ನಡೆದಿದೆ.

Home add -Advt

ಅಂಬೇಡ್ಕರ್ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಹೇಳಿಕೆ ಖಂಡಿಸಿ ವಿಧಾನಪರಿಷತ್ ಕಲಾಪದ ವೇಳೆ ಕಾಂಗ್ರೆಸ್ ಸಚಿವರು, ಶಾಸಕರು ಅಂಬೇಡ್ಕರ್ ಫೋಟೋ ಹಿಡಿದು, ಅಮಿತ್ ಶಾ ವಿರುದ್ಧ ಪ್ರತಿಭಟನೆ ನಡೆಸಿದರು. ಅಮಿತ್ ಶಾ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ ವ್ಯಕ್ತಪಡಿಸಿದರು, ಅಮಿತ್ ಶಾ ಕ್ಷಮೆ ಕೇಳುವಂತೆ ಒತ್ತಾಯಿಸಿದರು. ಇದಕ್ಕೆ ಬಿಜೆಪಿ ಸದಸ್ಯರು ವಿರೋಧ ವ್ಯಕ್ತಪಡಿಸಿ ಕಾಂಗ್ರೆಸ್ ನಾಯಕರ ವಿರುದ್ಧ ಕಿಡಿಕಾರಿದರು.

ಈ ವೇಳೆ ಪರಿಷತ್ ಬಿಜೆಪಿ ಸದಸ್ಯ ಸಿ.ಟಿ ರವಿ, ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿಯವರನ್ನು ನಿಂದಿಸಿ ವಾಗ್ದಾಳಿ ನಡೆಸಿದ್ದಾರೆ. ಇದಕ್ಕೆ ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಆಕ್ಷೇಪ ವ್ಯಕ್ತಪಡಿಸುತ್ತಿದ್ದಂತೆ, ಸಿ.ಟಿ. ರವಿ ಲಕ್ಷ್ಮೀ ಹೆಬ್ಬಾಳಕರ್ ಅವರಿಗೆ ಅವಾಚ್ಯ ಶಬ್ಧಗಳಿಂದ ನಿಂದಿಸಿದ್ದಾರೆ.

ಸಚಿವೆ ಲಕ್ಷ್ಮೀ ಹೆಬ್ಬಾಳಕರ್ ಬಗ್ಗೆ ಸಿ.ಟಿ.ರವಿ ಅವಾಚ್ಯವಾಗಿ ನಿಂದಿಸುತ್ತಿದ್ದಂತೆ ಸಿಡಿದೆದ್ದ ಕಾಂಗ್ರೆಸ್ ನಾಯಕರು, ಸಿ.ಟಿ.ರವಿ ಅವರನ್ನು ವಜಾಗೊಳಿಸುವಂತೆ ಆಗ್ರಹಿಸಿದ್ದಾರೆ.

ಅಲ್ಲದೇ ಸಭಾಪತಿ ಬಸವರಾಜ್ ಹೊರಟ್ಟಿ ಅವರ ಕೊಠಡಿಗೆ ತೆರಳಿ, ಸಚಿವರನ್ನು ಅವಾಚ್ಯ ಪದಗಳಿಂದ ನಿಂದಿಸಿದ್ದು, ಈ ಬಗ್ಗೆ ಕ್ರಮ ಕೈಗೊಳ್ಳುವಂತೆ ದೂರು ನೀಡಿದ್ದಾರೆ. ಸಭಾಪತಿ ಹೊರಟ್ಟಿ ಸದನದ ಆಡಿಯೋ, ವಿಡಿಯೋ ಪರಿಶೀಲನೆಗೆ ಸೂಚಿಸಿದ್ದಾರೆ.

ಇನ್ನೊಂದೆಡೆ ಡಿಸಿಎಂ ಡಿ.ಕೆ.ಶಿವಕುಮಾರ್, ಕಾನೂನು ಸಚಿವ ಎಚ್ ಕೆ.ಪಾಟೀಲ ಮೊದಲಾದವರು ಸಭಾಪತಿ ಹೊರಟ್ಟಿ ಜೊತೆ ಸಭೆ ನಡೆಸಿ, ಸಿ.ಟಿ.ರವಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದಾರೆ.

Related Articles

Back to top button