
ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಕಾಂಗ್ರೆಸ್ ಚುನಾವಣಾ ಪ್ರಣಾಳಿಕೆಯಲ್ಲಿ ಬಜರಂಗದಳ ಬ್ಯಾನ್ ಮಾಡುವುದಾಗಿ ಹೇಳಿರುವುದು ಬಿಜೆಪಿ ನಾಯಕರು ಹಾಗೂ ಹಿಂದೂಪರ ಸಂಘಟನೆಗಳ ಕೆಂಗಣ್ಣಿಗೆ ಕಾರಣವಾಗಿದ್ದು, ಕಾಂಗ್ರೆಸ್ ವಿರುದ್ಧ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ.
ಕಾಂಗ್ರೆಸ್ ಪ್ರಣಾಳಿಕೆ ಬಗ್ಗೆ ಚಿಕ್ಕಮಗಳೂರಿನಲ್ಲಿ ಮಾತನಾಡಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕಾಂಗ್ರೆಸ್ ಗೆ ತಾಲಿಬಾನಿಗಳಿಗೂ ರಾಷ್ಟ್ರಭಕ್ತರಿಗೂ ವ್ಯತ್ಯಾಸ ಗೊತ್ತಿಲ್ಲ. ಇದು ಕಾಂಗ್ರೆಸ್ ಪಕ್ಷದ ಬೌದ್ಧಿಕ ದಿವಾಳಿತನ. ಉಗ್ರರು, ದೇಶಭಕ್ತರನ್ನು ಒಂದೇ ತಕ್ಕಡಿಯಲ್ಲಿಟ್ಟು ನೋಡುತ್ತಿದ್ದಾರೆ. ಕಾಂಗ್ರೆಸ್ ಮನಸ್ಥಿತಿಗೆ ನನ್ನ ಧಿಕ್ಕಾರ ಎಂದು ಆಕ್ರೋಶ ವ್ಯಕ್ತಪಡಿಸಿದರು.
ಇದು ಹನುಮಾನ್ ನಾಡು. ಇಲ್ಲಿ ಹನುಮಂತನನ್ನು ಆರಾಧಿಸುವ ಬಜರಂಗದಳವನ್ನು , ದೇಶಭಕ್ತರ ಸಂಘಟನೆಯನ್ನು ನಿಷೇಧ ಮಾಡುವುದಾಗಿ ಕಾಂಗ್ರೆಸ್ ಹೇಳಿರುವುದು ಖಂಡನೀಯ. ಇದೇ ರೀತಿ ಮುಂದುವರೆದರೆ ಜನ ನಿಮ್ಮನ್ನು ಬ್ಯಾನ್ ಮಾಡ್ತಾರೆ. ಆ ಕಾಲ ತುಂಬಾ ದೂರ ಇಲ್ಲ ಎಂದು ಗುಡುಗಿದ್ದಾರೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ