Kannada NewsLatest

ಅರಾಜಕತೆ ಸಂಘರ್ಷ ಸೃಷ್ಟಿಸಲೆಂದೆ ಕೆಲವರಿಂದ ಕೃತ್ಯ; ಸಿ.ಟಿ.ರವಿ ವಾಗ್ದಾಳಿ

ಪ್ರಗತಿವಾಹಿನಿ ಸುದ್ದಿ; ಬೆಳಗಾವಿ: ಬೆಳಗಾವಿಯಲ್ಲಿ ಎಂಇಎಸ್ ಪುಂಡಾಟ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರತಿಕ್ರಿಯಿಸಿರುವ ಬಿಜೆಪಿ ರಾಷ್ಟ್ರೀಯ ಪ್ರಧಾನ ಕಾರ್ಯದರ್ಶಿ ಸಿ.ಟಿ.ರವಿ, ಕೆಲವರು ಅರಾಜಕತೆ- ಸಂಘರ್ಷ ಸೃಷ್ಟಿಸಲೆಂದೇ ಇಂತಹ ಸಂಚು ರೂಪಿಸಿದ್ದಾರೆ ಎಂದು ಕಿಡಿಕಾರಿದ್ದಾರೆ.

ಮಹಾರಾಷ್ಟ್ರದ ಕೊಲ್ಲಾಪುರದಲ್ಲಿ ಕನ್ನಡ ಬಾವುಟ ಸುಟ್ಟರು, ಅಲ್ಲಿನ ಸರ್ಕಾರದಲ್ಲಿ ಕಾಂಗ್ರೆಸ್ ಪಾಲುದಾರಿಕೆ ಹೊಂದಿದೆ. ಇಲ್ಲಿ ಶಿವಾಜಿ ಪ್ರತಿಮೆಗೆ ಮಸಿ ಬಳಿಯುವ ಕೆಲಸ ಮಾಡಿದರು. ಕಿಡಿಗೇಡಿಗಳ ಉದ್ದೇಶ ಕರ್ನಾಟಕ-ಮಹಾರಾಷ್ಟ್ರ ಸಂಘರ್ಷವಾಗಲಿ ಎಂಬುದು. ಇಂತಹ ದುರುದ್ದೇಶಗಳು ಕೊನೆಯಾಗಬೇಕು ಎಂದು ಹೇಳಿದರು.

ಮಹಾರಾಷ್ಟ್ರದಲ್ಲಿ ಲಕ್ಷಾಂತರ ಕನ್ನಡಿಗರಿದ್ದಾರೆ, ಕರ್ನಾಟಕದಲ್ಲಿ ಲಕ್ಷಾಂತರ ಮರಾಠಿಗರಿದ್ದಾರೆ. ನಮ್ಮೆಲ್ಲರ ಭಾವನೆ ರಾಷ್ಟ್ರೀಯತೆ ಜೊತೆ ಹಾಸುಹೊಕ್ಕಾಗಿದೆ. ರಾಷ್ಟ್ರೀಯ ಹಿತಶಕ್ತಿಗೆ ಧಕ್ಕೆ ತರಲು ಕೆಲವರು ಷಡ್ಯಂತ್ರ ನಡೆಸಿದ್ದಾರೆ. ಈ ಷಡ್ಯಂತ್ರಕ್ಕೆ ಒಳಗಾಗದೇ ಶಾಂತಿ-ಸೌಹಾರ್ದತೆ ಕಾಪಾಡುವಂತೆ ಮನವಿ ಮಾಡಿದ್ದಾರೆ.

ಕರ್ನಾಟಕ – ಮಹಾರಾಷ್ಟ್ರ ಮಧ್ಯೆ ಬಸ್ ಸಂಚಾರ ಬಂದ್

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button