Latest

ಸಿ.ಟಿ.ರವಿಗೆ ಹರುಕು ಕಚ್ಚೆ ಕಳುಹಿಸುವುದಾಗಿ ಎಚ್ಚರಿಕೆ ಕೊಟ್ಟ ಕಾಂಗ್ರೆಸ್

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ವಿಪಕ್ಷ ನಾಯಕ ಸಿದ್ದರಾಮಯ್ಯ ’ಕಚ್ಚೆ ಹರುಕ’ ಎಂದು ಹೇಳಿದ್ದ ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ ವಿರುದ್ಧ ಕಾಂಗ್ರೆಸ್ ಕಿಸಾನ್ ಘಟಕ ಕಿಡಿಕಾರಿದ್ದು, ಮೊದಲು ತಮ್ಮ ಹೇಳಿಕೆಗೆ ಕ್ಷಮೆಯಾಚಿಸುವಂತೆ ಆಗ್ರಹಿಸಿದೆ.

ಸಿ.ಟಿ.ರವಿ ಹೇಳಿಕೆಗೆ ಆಕ್ರೋಶ ವ್ಯಕ್ತಪಡಿಸಿರುವ ಕಾಂಗ್ರೆಸ್ ಕಿಸಾನ್ ಘಟಕದ ಅಧ್ಯಕ್ಷ ಸಚಿನ್ ಮಿಗಾ, ಬಿಜೆಪಿ ನಾಯಕ ಸಿ.ಟಿ.ರವಿಯವರಿಗೆ ವಿಧಾನಸಭಾ ಚುನಾವಣೆಯಲ್ಲಿ ಸೋಲಿನ ಭೀತಿ ಶುರುವಾಗಿದೆ. ಚಿಕ್ಕಮಗಳೂರಿನಲ್ಲಿ ಸಿದ್ದರಾಮಯ್ಯ ಸ್ಪರ್ಧಿಸಬಹುದು ಎಂಬ ಆತಂಕದಿಂದ ಅವರ ವಿರುದ್ಧ ನಾಲಿಗೆ ಹರಿಬಿಟ್ಟು ಇಲ್ಲಸಲ್ಲದ ಹೇಳಿಕೆ ಕೊಡುತ್ತಿದ್ದಾರೆ ಎಂದು ವಾಗ್ದಾಳಿ ನಡೆಸಿದ್ದಾರೆ.

ಮಾಜಿ ಸಿಎಂ, ವಿಪಕ್ಷ ನಾಯಕ ಸಿದ್ದರಾಮಯ್ಯ ವಿರುದ್ಧ ಇಂತಹ ವಿವಾದಾತ್ಮಕ ಹೇಳಿಕೆ ನೀಡಿದ್ದು, ಸಿ.ಟಿ.ರವಿಯವರಿಗೆ ಶೋಭೆ ತರಲ್ಲ. ಮೊದಲು ಸಿ.ಟಿ.ರವಿ ಸಿದ್ದರಾಮಯ್ಯ ಅವರ ಕ್ಷಮೆಯಾಚಿಸಲಿ. ಇಲ್ಲವಾದರೆ ಸಿ.ಟಿ.ರವಿಯವರಿಗೆ ಕಾಂಗ್ರೆಸ್ ಕಿಸಾನ್ ಘಟಕದಿಂದ ಹರಕು ಕಚ್ಚೆ ರವಾನಿಸುತ್ತೇವೆ ಎಂದು ಎಚ್ಚರಿಕೆ ನೀಡಿದ್ದಾರೆ.

ರಾಜ್ಯ ಮುಕ್ತ ವಿಶ್ವ ವಿದ್ಯಾಲಯದ ಪತ್ರಿಕೋದ್ಯಮ ವಿಭಾಗದಲ್ಲಿ ವಾಮಾಚಾರ…?

Home add -Advt

https://pragati.taskdun.com/latest/mysore-open-univercityvamacharahod-tejaswi/

Related Articles

Back to top button