*ಸಿ.ಟಿ.ರವಿ ವಿರುದ್ಧ ಪೋಸ್ಟ್; ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ FIR ದಾಖಲು*

ಪ್ರಗತಿವಾಹಿನಿ ಸುದ್ದಿ; ಚಿಕ್ಕಮಗಳೂರು: ಸಿ.ಟಿ.ರವಿ ವಿರುದ್ಧ ಸಾಮಾಜಿಕ ಜಾಲತಾಣಗಳಲ್ಲಿ ಪೋಸ್ಟ್ ಮಾಡಿದ್ದ ಆರೋಪಕ್ಕೆ ಸಂಬಂಧಿಸಿದಂತೆ ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ಎಫ್ ಐ ಆರ್ ದಾಖಲಾಗಿದೆ.

ಕಾಂಗ್ರೆಸ್ ನ ಐಟಿ ವಿಭಾಗದಲ್ಲಿ ಕೆಲಸ ಮಾಡುತ್ತಿದ್ದ ದಾವಣಗೆರೆ ಮೂಲದ ಹರೀಶ್, ಗುರುಪಾಟೀಲ್ ಹಾಗೂ ತುಮಕೂರು ಮೂಲದ ಸುವರ್ಣಗಿರಿ ವಿರುದ್ಧ ಚಿಕ್ಕಮಗಳೂರಿನ ಬಸವನಹಳ್ಲಿ ಠಾಣೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

ಬಿಜೆಪಿ ರಾಷ್ಟ್ರೀಯ ಪ್ರಧಾನಕಾರ್ಯದರ್ಶಿ ಸಿ.ಟಿ.ರವಿ, ವೀರಶೈವ ಲಿಂಗಾಯಿತರಿಗೆ ಪ್ರಾಮುಖ್ಯತೆ ನೀಡಬೇಕಿಲ್ಲ ಎಂದು ಹೇಳಿಕೆ ನೀಡಿರುವುದಾಗಿ ಈ ಮೂಲವರು ಸಾಮಜೈಕ ಜಾಲತಾಣಗಳಲ್ಲಿ ಸುದ್ದಿ ಹಬ್ಬಿಸಿದ್ದರು. ಈ ಮೂಲಕ ಸಿ.ಟಿ.ರವಿ ವಿರುದ್ಧ ಸುಳ್ಳು ಸುದ್ದಿ ಹಬ್ಬಿಸಿದ್ದಾರೆ ಎಂದ್ ಆರೋಪಿಸಿ ಚಿಕ್ಕಮಗಳೂರು ಬಿಜೆಪಿ ಜಿಲ್ಲಾಧ್ಯಕ್ಷ ಕಲ್ಮರುಡಪ್ಪ ಮೂವರು ಕಾಂಗ್ರೆಸ್ ಕಾರ್ಯಕರ್ತರ ವಿರುದ್ಧ ದೂರು ನೀಡಿದ್ದರು. ಈ ಹಿನ್ನೆಲೆಯಲ್ಲಿ ಎಫ್ ಐ ಆರ್ ದಾಖಲಾಗಿದೆ.

https://pragati.taskdun.com/siddaramaiahclarificationstatment/

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button