ಪೌರತ್ವ ಕಾಯ್ದೆ ಜಾಗೃತಿ ಜಾಥಾ ವೇಳೆ ತೇಜಸ್ವಿ ಸೂರ್ಯ, ಸೂಲಿಬೆಲೆ ಹತ್ಯೆಗೆ ನಡೆದಿತ್ತು ಸಂಚು

ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ಪರ ಜಾಗೃತಿ ಮೂಡಿಸಲು ಬೆಂಗಳೂರಿನಲ್ಲಿ ಹಮ್ಮಿಕೋಳ್ಳಲಾಗಿದ್ದ ಕಾರ್ಯಕ್ರಮದ ವೇಳೆ ಆರ್ ಎಸ್ ಎಸ್ ಮುಖಂಡರ ಹತ್ಯೆಗೆ ಸಂಚು ರೂಪಿಸಲಾಗಿತ್ತು. ಪ್ರಮುಖವಾಗಿ ಸಂಸದ ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆ ಕೊಲೆಗೆ ಸ್ಕೆಚ್ ನಡೆದಿತ್ತು ಎನ್ನುವ ಆತಂಕಕಾರಿ ವಿಚಾರ ಬೆಳಕಿಗೆ ಬಂದಿದೆ.

ಡಿ. 22ರಂದು ಟೌನ್​ಹಾಲ್ ಬಳಿ ಸಿಎಎ ಜಾಗೃತಿ ಜಾಥಾ ನಡೆದಿತ್ತು. ಇದರಲ್ಲಿ ತೇಜಸ್ವಿ ಸೂರ್ಯ, ಚಕ್ರವರ್ತಿ ಸೂಲಿಬೆಲೆ ಸೇರಿ ಅನೇಕ ಪ್ರಮುಖ ನಾಯಕರು ಪಾಲ್ಗೊಂಡಿದ್ದರು. ಸಿಎಎ ಜಾಗೃತಿ ಜಾಥಾ ಮುಗಿಸಿ ತೆರಳುವಾಗ ಆರ್​ಎಸ್​ಎಸ್​ ಕಾರ್ಯಕರ್ತ ವರುಣ್ ಮೇಲೆ ಜೆ.ಸಿ ನಗರದ ರಸ್ತೆಯಲ್ಲಿ 6 ಜನ ಎಸ್​ಡಿಪಿಐ ಕಾರ್ಯಕರ್ತರಿಂದ ಕೊಲೆಗೆ ಯತ್ನ ನಡೆದಿತ್ತು.

ಎರಡು ಬೈಕ್​ಗಳಲ್ಲಿ ಬಂದಿದ್ದ ಆರೋಪಿಗಳು ವರುಣ್ ಮೇಲೆ ರಾಡ್ ಹಾಗೂ ಲಾಂಗ್​ಗಳಿಂದ ಹಲ್ಲೆ ಮಾಡಿದ್ದರು. ಪ್ರಕರಣಕ್ಕೆ ಸಂಬಂಧಿಸಿ ಸಾಧಿಕ್, ಅಕ್ಬರ್ ಸೇರಿ ಆರು ಜನರನ್ನ ಪೊಲೀಸರು ಬಂಧಿಸಿದ್ದರು. ವಿಚಾರಣೆ ವೇಳೆ ಆರೋಪಿಗಳು ಆಘಾತಕಾರಿ ವಿಚಾರ ಬಾಯ್ಬಿಟ್ಟಿದ್ದು,  ವರುಣ್ ಇವರ ಟಾರ್ಗೆಟ್​ ಆಗಿರಲಿಲ್ಲ. ​ತೇಜಸ್ವಿ ಸೂರ್ಯ ಹಾಗೂ ಚಕ್ರವರ್ತಿ ಸೂಲಿಬೆಲೆಯನ್ನು ಹತ್ಯೆ ಮಾಡುವುದು ನಮ್ಮ ಮುಖ್ಯ ಉದ್ದೇಶ ಆಗಿತ್ತು ಎಂದು ಆರೋಪಿಗಳು ತಪ್ಪೊಪ್ಪಿಕೊಂಡಿದ್ದಾರೆ.

Home add -Advt

ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ

Related Articles

Back to top button