ಪ್ರಗತಿವಾಹಿನಿ ಸುದ್ದಿ; ಲಖಾನೌ: ಅಯೋಧ್ಯೆಯಲ್ಲಿ ಇನ್ನು 3 ತಿಂಗಳಲ್ಲಿ ಗಗನಚುಂಬಿ ಭವ್ಯ ರಾಮಮಂದಿರ ನಿರ್ಮಾಣ ಕಾರ್ಯ ಆರಂಭವಾಗಲಿದೆ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ತಿಳಿಸಿದ್ದಾರೆ.
ಉತ್ತರ ಪ್ರದೇಶದ ಲಖನೌನಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ ಪರ ರ್ಯಾಲಿಯಲ್ಲಿ ಪಾಲ್ಗೊಂಡು ಮಾತನಾಡಿದ ಅಮಿತ್ ಶಾ, ದೇಶದಲ್ಲಿ ಸುದೀರ್ಘ ಸಮಯ ಆಡಳಿತ ನಡೆಸಿದ್ದ ಕಾಂಗ್ರೆಸ್ ಪಕ್ಷ ರಾಮಮಂದಿರ ನಿರ್ಮಾಣ ಮಾಡಲಿಲ್ಲ. ಅದರ ನಿರ್ಮಾಣಕ್ಕೆ ಬೆಂಬಾಲವನ್ನೂ ನೀಡಲಿಲ್ಲ. ಇದೀಗ 3 ತಿಂಗಳಿನಾಲ್ಲಿ ಭವ್ಯ ರಾಮಮಂದಿರ ನಿರ್ಮಾಅಣ ಕಾರ್ಯ ಆರಂಭವಾಗಲಿದೆ ಎಂದರು.
60 ವರ್ಷ ದೇಶವನ್ನಾಳಿದ ಕಾಂಗ್ರೆಸ್ ಪಕ್ಷ, ಧರ್ಮದ ಆಧಾರದ ಮೇಲೆ ದೇಶವನ್ನು ಒಡೆಯುವ ಕೆಲಸವನ್ನು ಮಾಡಿದೆ. ವೋಟ್ ಬ್ಯಾಂಕ್ ರಾಜಕಾರಣಕ್ಕಾ ಅಲ್ಪ ಸಂಖ್ಯಾತರನ್ನು ತಪ್ಪುದಾರಿಗೆ ಎಳೆಯುತ್ತಿದೆ. ಅದರೆ ಬಿಜೆಪಿ ಎಂದೂ ವೋಟ್ ಬ್ಯಾಂಕ್ ರಾಜಕಾರಣ ಮಾಡಿಲ್ಲ. ಎಲ್ಲ ಸಮುದಾಯವನ್ನು ಸಮಾನವಾಗಿ ಕಾಣುತ್ತಿದೆ ಈ ನಿಟ್ಟಿನಲ್ಲಿ ಯಾರು ಎಷ್ಟೇ ಪ್ರತಿಭಟನೆ ನಡೆಸಿದರೂ ಪೌರತ್ವ ತಿದ್ದುಪಡಿ ಕಾಯ್ದೆಯನ್ನು ಹಿಂಪಡೆಯುವ ಪ್ರೆಶ್ನೆಯೇ ಇಲ್ಲ ಎಂದು ಹೇಳಿದರು.
ವಿಪಕ್ಷಗಳು ಆರೋಪಿಸುವಂತೆ ಸಿಎಎ ಯಾವುದೇ ವ್ಯಕ್ತಿಯ ಪೌರತ್ವವನ್ನು ಹೇಗೆ ಕಿತ್ತುಕೊಳ್ಳುತ್ತದೆ ಎಂಬುದನ್ನು ಸಾಬೀತುಪಡಿಸಿ ತೋರಿಸಲಿ. ಪ್ರತಿಭಟನೆಗಾಳಿಗೆ ಪ್ರಚೋದಿಸುತ್ತಿರುವ ಕಾಂಗ್ರೆಸ್, ಎಸ್ ಪಿ, ತೃಣಮೂಲ ಕಾಂಗ್ರೆಸ್ ಮತ್ತು ಬಿಎಸ್ ಪಿ ಪಕ್ಷಗಳು ಈ ಕುರಿತು ಸಾರ್ವಜನಿಕವಾಗಿ ಚರ್ಚೆಗೆ ಬರಲಿ ಎಂದು ಸವಾಲು ಹಾಕಿದರು.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ