
ಪ್ರಗತಿವಾಹಿನಿ ಸುದ್ದಿ: ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟಕ್ಕೆ ಮೇಜರ್ ಸರ್ಜರಿ ನಡೆಯಲಿದೆ. ನವೆಂಬರ್ ನಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ ಎಂದು ವಿಧಾನಪರಿಷತ್ ಮುಖ್ಯಸಚೇತಕ ಸಲೀಂ ಅಹ್ಮದ್ ತಿಳಿಸಿದ್ದಾರೆ.
ನವದೆಹಲಿಯಲ್ಲಿ ಮಾತನಾಡಿದ ಸಲಿಂ ಅಹ್ಮದ್, ನವೆಂಬರ್ ತಿಂಗಳಲ್ಲಿ ಸಚಿವ ಸಂಪುಟ ವಿಸ್ತರಣೆಯಾಗಲಿದೆ. ಶೇ.50ರಷ್ಟು ಸಚಿವರನ್ನು ಸಂಪುಟದಿಂದ ಕೈಬಿಡಲಾಗುವುದು. ಹೊಸ ಮುಖಗಳಿಗೆ ಅವಕಾಶ ನೀಡಲಾಗುವುದು ಎಂದು ಹೇಳಿದರು.
ಈ ಬಾರಿ ನನಗೆ ಸಚಿವ ಸ್ಥಾನ ಸಿಗುವ ವಿಶ್ವಾಸವಿದೆ. ಸಚಿವ ಸಂಪುಟದಿಂದ ಕೈಬಿಡಲಾಗುವ ಸಚಿವರಿಗೆ ಪಕ್ಷದ ಜವಾಬ್ದಾರಿ ನೀಡಲಾಗುವುದು ಎಂದು ತಿಳಿಸಿದ್ದಾರೆ.


