Belagavi NewsBelgaum NewsKannada NewsKarnataka NewsPolitics

*ಸಚಿವ ಸಂಪುಟ ವಿಸ್ತರಣೆ ನಮ್ಮ ಕೈಯಲ್ಲಿ ಇಲ್ಲ: ಸಚಿವ ಸತೀಶ್ ಜಾರಕಿಹೊಳಿ*

ಪ್ರಗತಿವಾಹಿನಿ ಸುದ್ದಿ, ಬೆಳಗಾವಿ: ಸಚಿವ ಸಂಪುಟ ವಿಸ್ತರಣೆಯೂ ನಮ್ಮ ಕೈಯಲ್ಲಿ ಇಲ್ಲ. ಇಂತಹ ವಿಷಯಗಳಲ್ಲಿ ವರಿಷ್ಠರು ನಿರ್ಧಾರ ಕೈಗೊಳ್ಳುತ್ತಾರೆ. ಇನ್ನು ನಾಯಕತ್ವ ಗೊಂದಲದ ಬಗ್ಗೆಯೂ ಗಮನಿಸುತ್ತಿದ್ದಾರೆ. ಈ ಕುರಿತು ಅವರೇ ಸ್ಪಷ್ಟ ಪಡಿಸಿದರೆ ಒಳ್ಳೆಯದು ಎಂದು ಲೋಕೋಪಯೋಗಿ ಇಲಾಖೆ ಸಚಿವ ಸತೀಶ್ ಜಾರಕಿಹೊಳಿ ಅವರು ತಿಳಿಸಿದರು.

ಕುವೆಂಪು ನಗರದ ಸ್ವಗೃಹದಲ್ಲಿ ದೆಹಲಿ ಪ್ರವಾಸದಲ್ಲಿ ರಣದೀಪ್ ಸಿಂಗ್ ಸುರ್ಜೇವಾಲ ಭೇಟಿ ಬಗ್ಗೆ ಮಾತನಾಡಿದ ಅವರು, ಕೆಪಿಸಿಸಿ ಪ್ರಧಾನ ಕಾರ್ಯದರ್ಶಿ ಸುನೀಲ್‌ ಹನುಮಣ್ಣವರ ಕೆಎಸ್‌ಆರ್‌ಟಿಸಿಯ ಉಪಾಧ್ಯಕ್ಷರಾಗಿ ಆಯ್ಕೆಯಾದ ಹಿನ್ನೆಲೆಯಲ್ಲಿ ದೆಹಲಿಯಲ್ಲಿ ರಾಜ್ಯ ಕಾಂಗ್ರೆಸ್ ಉಸ್ತುವಾರಿ ರಣದೀಪ್ ಸಿಂಗ್ ಸುರ್ಜೇವಾಲ ಅವರನ್ನು ಭೇಟಿಯಾಗಿ ಅಭಿನಂದನೆ ಸಲ್ಲಿಸಿದ್ದೇವೆ ಅಷ್ಟೇ ಎಂದರು.

ಸತೀಶ್ ಜಾರಕಿಹೊಳಿ ಅವರು ಕೆಪಿಸಿಸಿ ಅಧ್ಯಕ್ಷ ಆಗುತ್ತಾರೆಂಬ ಚರ್ಚೆ ನಡೆಯುತ್ತಿದೆ ಎಂಬ ಪ್ರಶ್ನೆಗೆ ಪ್ರತಿಕ್ರಿಯೆ ನೀಡಿ, ರಾಜ್ಯದಲ್ಲಿ 6 ಕೋಟಿ ಜನ ಸಂಖ್ಯೆ ಇದೆ. ಚರ್ಚೆ ಆಗುವುದು ಸ್ವಾಭಾವಿಕ. ಚರ್ಚೆಗೆ ಯಾವುದೇ ಕಡಿವಾಣವಿಲ್ಲ. ಆದರೆ ಕೆಪಿಸಿಸಿ ಅಧ್ಯಕ್ಷ ಆಯ್ಕೆ ವಿಷಯ ಹೈಕಮಾಂಡ್ ಗೆ ಬಿಟ್ಟದ್ದು ಎಂದು ಹೇಳಿದರು.

ಬಿಹಾರ ಚುನಾವಣೆಯಲ್ಲಿ ಗೆಲ್ಲುತ್ತೇವೆಂಬ ಆಶಯ ಇತ್ತು. ಆದರೆ ನಮ್ಮ ನಿರೀಕ್ಷೆ ಸುಳ್ಳಾಗಿದೆ. ಇನ್ನು ಇವಿಎಂ ಬಗ್ಗೆ ಅನುಮಾನ ಇದ್ದೇ ಇದೆ. ಇವಿಎಂ ಬಗ್ಗೆ ಕೊನೆವರೆಗೂ ಅನುಮಾನ ಇದ್ದೇ ಇರುತ್ತದೆ. ಈ ಬಗ್ಗೆ ಕೇಂದ್ರ ಸರ್ಕಾರ, ಚುನಾವಣೆ ಆಯೋಗ ಸ್ಪಷ್ಟ ಪಡಿಸಬೇಕೆಂದು ಆಗ್ರಹಿಸಿದ ಸಚಿವರು, ಬಿಹಾರ ಚುನಾವಣೆ ಫಲಿತಾಂಶ ಕರ್ನಾಟಕದ ಮೇಲೆ ಪರಿಣಾಮ ಬೀರಲ್ಲ ಎಂದರು.

Home add -Advt

ಇನ್ನು ಭೂತರಾಮನಹಟ್ಟಿಯ ಕಿತ್ತೂರು ರಾಣಿ ಚೆನ್ನಮ್ಮಕಿರು ಮೃಗಾಲಯದಲ್ಲಿ 28 ಜಿಂಕೆಗಳು ಸಾವನ್ನಪ್ಪಿರುವ ಬಗ್ಗೆ ಮಾತನಾಡಿದ ಸಚಿವರು, ಮೃಗಾಲಯದಲ್ಲಿ 28 ಜಿಂಕೆಗಳು ಸಾವನ್ನಪ್ಪಿರುವ ಬಗ್ಗೆ ಈಗಾಗಲೇ ಅರಣ್ಯ ಸಚಿವ ಈಶ್ವರ್ ಖಂಡ್ರೆ ಅವರು ತನಿಖೆಗೆ ಆದೇಶಿಸಿದ್ದಾರೆ. ಯಾವ ಕಾರಣಕ್ಕೆ ಜಿಂಕೆಗಳು ಸಾವನ್ನಪ್ಪಿವೆ ಎಂಬ ಕುರಿತು ತನಿಖೆ ಆದ ಬಳಿಕ ನಿಜಾಂಶ ತಿಳಿಯಲಿದೆ ಎಂದರು.

Related Articles

Back to top button