ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಈಗಾಗಲೇ ಬಿಜೆಪಿ ಹೈಕಮಾಂಡ್ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಸಮ್ಮತಿ ಸೂಚಿಸಿದ್ದು, ಉಪಚುನಾವಣೆಯಲ್ಲಿ ಗೆಲುವು ಸಾಧಿಸಿದ 11 ಶಾಸಕರಲ್ಲಿ 10 ಶಾಸಕರಿಗೆ ಸಚಿವ ಸ್ಥಾನ ನೀಡಲು ಒಪ್ಪಿಗೆ ಸೂಚಿಸಿದೆ. ಈ ಮೂಲಕ 10+3 ಸೂತ್ರದಡಿ ಸಂಪುಟ ವಿಸ್ತರಣೆಗೆ ನಿರ್ಧರಿಸಲಾಗಿದೆ ಎಂದು ತಿಳಿದುಬಂದಿದೆ.
ಸಚಿವ ಸಂಪುಟ ವಿಸ್ತರಣೆ ವಿಚಾರವಾಗಿ ಸಿಎಂ ಬಿ ಎಸ್ ಯಡಿಯೂರಪ್ಪ ಇಂದು ಬಿಜೆಪಿ ರಾಷ್ಟ್ರಾಧ್ಯಕ್ಷ ಜೆ.ಪಿ ನಡ್ಡಾ ಹಾಗೂ ಅಮಿತ್ ಶಾ ಅವರನ್ನು ಭೇಟಿಯಾಗಿ, ಸಂಪುಟ ವಿಸ್ತರಣೆ ಪಟ್ಟಿ ಸಲ್ಲಿಸಿದ್ದಾರೆ. ಉಪಚುನಾವಣೆಯಲ್ಲಿ ಗೆದ್ದ 10 ಶಾಸಕರಿಗೆ ಸಚಿವ ಸ್ಥಾನ ನೀಡಲು ಹೈಕಮಾಂಡ್ ಒಪ್ಪಿಗೆ ಸೂಚಿಸಿದೆ. ಇದರ ಜತೆಗೆ ಮೂಲ ಬಿಜೆಪಿಯ ಮೂವರಿಗೆ ಸಚಿವ ಸ್ಥಾನ ನೀಡಲು ನಿರ್ಧರಿಸಲಾಗಿದೆ ಎನ್ನಲಾಗಿದೆ.
ಮೂಲ ಬಿಜೆಪಿಯ ಶಾಸಕರಾದ ಉಮೇಶ್ ಕತ್ತಿ, ಅರವಿಂದ ಲಿಂಬಾವಳಿ ಹಾಗೂ ರಾಮದಾಸ್ ಆವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆಯಿದೆ. ಆದರೆ ಶಾಸಕ ಮಹೇಶ್ ಕುಮಟಳ್ಳಿಯವರಿಗೆ ಸಚಿವ ಸ್ಥಾನ ಕೈತಪ್ಪುವ ಸಾಧ್ಯತೆ ದಟ್ಟವಾಗಿದೆ ಎಂದು ಸಿಎಂ ಆಪ್ತ ವಲಯಗಳು ತಿಳಿಸಿವೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ