ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಆರೋಗ್ಯ ಮತ್ತು ವೈದ್ಯಕೀಯ ಶಿಕ್ಷಣ ಖಾತೆಯನ್ನು ಒಬ್ಬರಿಗೇ ನೀಡಬೇಕು. ವೈದ್ಯಕೀಯ ಶಿಕ್ಷಣ ಒಂದು ವಿಶೇಷವಾದ ಖಾತೆ. ಎರಡೂ ಖಾತೆಯಲ್ಲಿ ಪರಸ್ಪರ ಹೊಂದಾಣಿಕೆ ಅಗತ್ಯ ಎಂದು ಡಾ.ಕೆ.ಸುಧಾಕರ್ ತಿಳಿಸಿದ್ದಾರೆ.
ಸುದ್ದಿಗಾರರೊಂದಿಗೆ ಮಾತನಾಡಿದ ಅವರು, ಖಾತೆ ಹಿಂಪಡೆದ ಬಗ್ಗೆ ನನಗೆ ಅಸಮಾಧಾನವಿಲ್ಲ. ಆದರೆ ಆರೋಗ್ಯ ಹಾಗೂ ವೈದ್ಯಕೀಯ ಶಿಕ್ಷಣ ಎರಡೂ ಖಾತೆಗಳಿಗೂ ಸಾಮ್ಯತೆ ಇದೆ. ಹಾಗಾಗಿ ಒಬ್ಬರ ಬಳಿಯೇ ಈ ಎರಡೂ ಖಾತೆಗಳಿರುವುದು ಉತ್ತಮ. ಈ ಖಾತೆಗಳಲ್ಲಿ ಹೊಂದಾಣಿಕೆಯಿಲ್ಲದಿದ್ದರೆ ಗೊಂದಲಗಳುಂಟಾಗುವ ಸಾಧ್ಯತೆಯಿದೆ. ಕೊರೊನಾ ಲಸಿಕೆ ಹಂಚಿಕೆಯಲ್ಲಿ ಗೊಂದಲವಾಗಬಾರದು ಎಂಬುದು ನನ್ನ ಉದ್ದೇಶವಷ್ಟೇ ಎಂದರು.
ಇನ್ನು ಶಿವಮೊಗ್ಗದಲ್ಲಿ ಜಿಲೆಟಿನ್ ಸ್ಫೋಟಗೊಂಡು 8 ಕಾರ್ಮಿಕರು ಸಾವನ್ನಪ್ಪಿದ ಪ್ರಕರಣಕ್ಕೆ ಪ್ರತಿಕ್ರಿಯಿಸಿದ ಸಚಿವರು ಇದೊಂದು ದುರದೃಷ್ಟಕರ ಘಟನೆ. ಯಾರು ತಪ್ಪು ಮಾಡಿದ್ದಾರೆ ಅವರ ವಿರುದ್ಧ ಕ್ರಮ ಕೈಗೊಳ್ಳಬೇಕು. ಕೆಲ ಜಿಲ್ಲೆಗಳಲ್ಲಿ ಜಿಲೆಟಿನ್ ಅಗತ್ಯಕ್ಕಿಂತ ಹೆಚ್ಚು ಬಳಕೆಯಾಗುತ್ತಿದೆ. ನಿಯಮ ಉಲ್ಲಂಘಿಸಿ ಕ್ರಷರ್ ಕೆಲಸ ನಡೆಯುತ್ತಿದೆ. ಇದರಿಂದ ಜನರಿಗೆ ತೊಂದರೆಯಾಗುತ್ತಿದೆ ಎಂದು ಹೇಳಿದರು.
ಶಿವಮೊಗ್ಗದಲ್ಲಿ ಜಿಲೆಟೆನ್ ಸ್ಫೋಟ ಪ್ರಕರಣ; ಸಾವಿನ ಸಂಖ್ಯೆ 8ಕ್ಕೇರಿಕೆ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ