ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ಸಿಎಂ ಬಿ.ಎಸ್.ಯಡಿಯೂರಪ್ಪ ನೇತೃತ್ವದ ರಾಜ್ಯ ಸಚಿವ ಸಂಪುಟಕ್ಕೆ ನೂತನವಾಗಿ 7 ಸಚಿವರು ಸೇರ್ಪಡೆಯಾಗಿದ್ದಾರೆ.
ರಾಜಭವನದ ಗಾಜಿನ ಮನೆಯಲ್ಲಿ ನಡೆದ ಸಮಾರಂಭದಲ್ಲಿ ರಾಜ್ಯಪಾಲ ವಜೂ ಭಾಯ್ ವಾಲಾ ನೂತನ ಸಚಿವರಿಗೆ ಪ್ರಮಾಣವಚನ ಬೋಧಿಸಿದರು. ಬೆಳಗಾವಿ ಜಿಲ್ಲೆ ಹುಕ್ಕೇರಿ ಶಾಸಕ ಉಮೇಶ್ ಕತ್ತಿ ಸಚಿವರಾಗಿ ದೇವರ ಹೆಸರಲ್ಲಿ ಪ್ರಮಾಣವಚನ ಸ್ವೀಕರಿಸಿದರು.
ಮಹದೇವಪುರ ಕ್ಷೇತ್ರದ ಶಾಸಕ ಅರವಿಂದ ಲಿಂಬಾವಳಿ, ವಿಧಾನ ಪರಿಷತ್ ಸದಸ್ಯ ಎಂಟಿಬಿ ನಾಗರಾಜ್, ಎಸ್.ಅಂಗಾರ, ಮುರುಗೇಶ ನಿರಾಣಿ, ಆರ್.ಶಂಕರ, ಸಿ.ಪಿ.ಯೋಗೀಶ್ವರ ಪ್ರಮಾಣವಚನ ಸ್ವೀಕರಿಸಿದರು.
ಪಕ್ಷಕ್ಕೆ ನಿಷ್ಠೆ ದೌರ್ಭಲ್ಯವಲ್ಲ – ಶಾಸಕ ಅಭಯ ಪಾಟೀಲ ಆಕ್ರೋಶ
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ