
ಪ್ರಗತಿವಾಹಿನಿ ಸುದ್ದಿ; ಬೆಂಗಳೂರು: ರಾಜ್ಯ ಸಚಿವ ಸಂಪುಟ ವಿಸ್ತರಣೆ ಚಟುವಟಿಕೆ ಗರಿಗೆದರಿದ್ದು, ಸಂಪುಟದಲ್ಲಿರುವ ಕೆಲವರನ್ನು ಕೈಬಿಟ್ಟು, ಇನ್ನು ಕೆಲವರನ್ನು ಸೇರಿಸಿಕೊಳ್ಳಲು ಸಿಎಂ ಯಡಿಯೂರಪ್ಪ ನಿರ್ಧರಿಸಿದ್ದಾರೆ. ಈ ಹಿನ್ನೆಲೆಯಲ್ಲಿ ಹಿರಿಯ ಶಾಸಕ ಉಮೇಶ್ ಕತ್ತಿ ಅವರಿಗೆ ಸಂಪುಟದಲ್ಲಿ ಸ್ಥಾನ ಸಿಗುವುದು ಬಹುತೇಕ ಖಚಿತವಾಗಿದೆ.
ಕೈಗಾರಿಕಾ ಸಚಿವ ಜಗದೀಶ್ ಶೆಟ್ಟರ್ ಅವರಿಗೆ ಬೆಳಗಾವಿ ಲೋಕಸಭಾ ಉಪಚುನಾವಣಾ ಟಿಕೆಟ್ ಕೊಡಿಸಲು ಸಿಎಂ ಬಿಎಸ್ ವೈ ಪ್ಲಾನ್ ರೂಪಿಸಿದ್ದು, ಶೆಟ್ಟರ್ ಸ್ಥಾನವನ್ನು ಉಮೇಶ್ ಕತ್ತಿ ಅವರಿಗೆ ನೀಡಲು ಸಿದ್ಧತೆ ನಡೆಸಲಾಗಿದೆ ಎನ್ನಲಾಗಿದೆ.
ಲಿಂಗಾಯಿತ ಕೋಟಾದಡಿ ಉಮೇಶ್ ಕತ್ತಿಯವರಿಗೆ ಸಚಿವ ಸ್ಥಾನ ನೀಡುವ ಸಾಧ್ಯತೆ ದಟ್ಟವಾಗಿದೆ. ಇನ್ನೊಂದೆಡೆ ಬೆಳಗಾವಿ ಲೋಕಸಭಾ ಉಪಚುನಾವಣಾ ಟಿಕೆಟ್ ಗಾಗಿ ಆಕಾಕ್ಷಿಗಳ ಪೈಪೋಟಿ ಕೂಡ ತೀವ್ರಗೊಂಡಿದ್ದು, ಶೆಟ್ಟರ್ ಗೆ ಟಿಕೆಟ್ ನೀಡುವ ಸಾಧ್ಯತೆಯಿದೆ ಎನ್ನಲಾಗಿದೆ.
ಪ್ರಗತಿವಾಹಿನಿ ಸುದ್ದಿಗಳನ್ನು ನಿಮ್ಮ ಸ್ನೇಹಿತರಿಗೆ, ಬೇರೆ ಗ್ರುಪ್ ಗಳಿಗೆ ಶೇರ್ ಮಾಡಿ