Latest

*ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಗ್ರೀನ್ ಸಿಗ್ನಲ್ ಕೊಟ್ಟ ಹೈಕಮಾಂಡ್*

 ಪ್ರಗತಿವಾಹಿನಿ ಸುದ್ದಿ; ಚಿತ್ರದುರ್ಗ: ವಿಧಾನಸಭಾ ಚುನಾವಣೆಗೆ ಕೆಲ ತಿಂಗಳುಗಳು ಮಾತ್ರ ಬಾಕಿಯಿರುವ ಈ ಸಂದರ್ಭದಲ್ಲಿ ಬಿಜೆಪಿ ಹೈಕಮಾಂಡ್ ಸಚಿವ ಸಂಪುಟ ವಿಸ್ತರಣೆಗೆ ಸಮ್ಮತಿ ಸೂಚಿಸಿದೆ. ಶೀಘ್ರದಲ್ಲಿಯೇ ರಾಜ್ಯ ಸಚಿವ ಸಂಪುಟ ವಿಸ್ತರಣೆ ಮಾಡಲಾಗುವುದು ಎಂದು ಸಿಎಂ ಬಸವರಾಜ್ ಬೊಮ್ಮಾಯಿ ತಿಳಿಸಿದ್ದಾರೆ.

ಚಿತ್ರದುರ್ಗದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಸಿಎಂ ಬೊಮ್ಮಾಯಿ, ಸಂಪುಟ ವಿಸ್ತರಣೆ ಬಗ್ಗೆ ಕೇಂದ್ರ ನಾಯಕರೊಂದಿಗೆ ಚರ್ಚೆ ನಡೆಸಿದ್ದೇನೆ. ಶೀಘ್ರದಲ್ಲಿ ಸಭೆ ನಡೆಸಿ ಸಂಪುಟ ವಿಸ್ತರಣೆ ಬಗ್ಗೆ ನಿರ್ಧಾರ ಕೈಗೊಳ್ಳಲಾಗುವುದು ಎಂದರು.

Related Articles
Home add -Advt

ರಮೇಶ್ ಜಾರಕಿಹೊಳಿ, ಕೆ.ಎಸ್.ಈಶ್ವರಪ್ಪ ಅವರಿಗೆ ಸಚಿವ ಸ್ಥಾನ ವಿಚಾರವಾಗಿ ಪ್ರತಿಕ್ರಿಯಿಸಿದ ಸಿಎಂ, ಈ ಬಗ್ಗೆ ಹೈಕಮಾಂಡ್ ಅಂತಿಮ ತೀರ್ಮಾನ ತೆಗೆದುಕೊಳ್ಳಲಿದೆ. ಜಿಲ್ಲಾವಾರು, ಪ್ರಾದೇಶಿಕವಾರು, ಸಾಮಾಜಿಕವಾರು ವಿಚಾರ ಚರ್ಚೆಯಲ್ಲಿದೆ. ಎಲ್ಲಾ ವಿಚಾರಗಳನ್ನೂ ಕೇಂದ್ರ ನಾಯಕರಿಗೆ ತಿಳಿಸಿದ್ದೇನೆ ಎಂದು ಹೇಳಿದರು.

*ಸಚಿವ ಮುರುಗೇಶ್ ನಿರಾಣಿಗೆ ಸವಾಲು ಹಾಕಿದ ಶಾಸಕ ಯತ್ನಾಳ್*

https://pragati.taskdun.com/basanagouda-patil-yatnalmurugesh-niranivijayapura/

Related Articles

Back to top button